ಕತ್ತಲಲ್ಲಿ ಕಾವಲಿಗೆ ನಿಂತ ಭಟ್ಕಳ ಮಹಿಳಾ ಪೊಲೀಸರು ಭಟ್ಕಳ : ಉತ್ತರಕನ್ನಡ ಜಿಲ್ಲೆಯಲ್ಲಿ ಮೊದಲ ಬಾರಿಗೆ ಭಟ್ಕಳದಲ್ಲಿ ರಾತ್ರಿ ವೇಳೆ ಮಹಿಳಾ ಪೊಲೀಸರ ಗಸ್ತು ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಮಂಗಳವಾರ ರಾತ್ರಿ ಪಿಎಸ್‌ಐ ಸುಮಾ ಬಿ. ನೇತೃತ್ವದಲ್ಲಿ ಕತ್ತಲಿನಲ್ಲಿಯೇ ರಸ್ತೆಗೆ ಇಳಿದ ಮಹಿಳಾ ಪೊಲೀಸ್ ಸಿಬ್ಬಂದಿಗಳು ಆಯಕಟ್ಟಿನ ಸ್ಥಳಗಳಲ್ಲಿ ನಿಂತು ವಾಹನ ತಪಾಸಣೆ ನಡೆಸಿದರು. ರಸ್ತೆಯಲ್ಲಿ ಅಡ್ಡಾಡುತ್ತಿದ್ದ ಸಂಶಯಾಸ್ಪದ ವ್ಯಕ್ತಿಗಳ ವಿಚಾರಣೆಯನ್ನೂ ನಡೆಸಿದರು. ಯಾವುದೇ ಅಳುಕು ಇಲ್ಲದೇ ತಂಡ ಕಟ್ಟಿಕೊಂಡು ಭಟ್ಕಳ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಗಸ್ತು ನಡೆಸಿ ಎಲ್ಲರ ಹುಬ್ಬೇರುವಂತೆ ಮಾಡಿದರು. ಬುಧವಾರ ನಸುಕಿನ ವೇಳೆ ಐದು ಗಂಟೆಯವರೆಗೂ ನಿದ್ದೆ ಬಿಟ್ಟು ಗಸ್ತು ನಡೆರುತ್ತಾರೆ. ಈ ವಿಶೇಷ ಕರ್ತವ್ಯ ನಿರ್ವಹಿಸಿದ ಪಿಎಸ್ಐ ಸುಮಾ ಬಿ ನೇತೃತ್ವದ ಮಹಿಳಾ ಪೊಲೀಸ್ ತಂಡಕ್ಕೆ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ. Share this:TweetWhatsAppEmailPrintTelegram