Log In
BREAKING NEWS >
ಜೂ.26ರ೦ದು ಉಡುಪಿ ಶ್ರೀಪುತ್ತಿಗೆ ಮಠದ ೪ನೇ ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ ಕಾರ್ಯಕ್ರಮ ಜರಗಲಿದೆ.....

ಉಡುಪಿ: ರಸ್ತೆಗೆ ನಾಥುರಾಮ್ ಗೋಡ್ಸೆ ಹೆಸರು – ವಿವಾದಾಸ್ಪದ ಬೋರ್ಡ್ ತೆರವುಗೊಳಿಸಿದ ಪೊಲೀಸರು

ಉಡುಪಿ:ಜೂ 06. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆಯೊಂದಕ್ಕೆ ನಾಥೂರಾಮ್ ಗೋಡ್ಸೆ ಹೆಸರು ಇಡಲಾಗಿದ್ದು, ಈ ಬಗ್ಗೆ ಕಾರ್ಕಳ ಯುವ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಬೋಳ ಗ್ರಾಮ ಪಂಚಾಯತ್ ಬಳಿಯಿರುವ ರಸ್ತೆಗೆ ‘ಪಡುಗಿರಿ ನಾಥೂರಾಮ್ ಗೋಡ್ಸೆ ರಸ್ತೆ’ ಎಂದು ನಾಮಫಲಕ ಹಾಕಲಾಗಿದ್ದು  ಈ ವಿಚಾರ ವಿವಾದಕ್ಕೆ ಕಾರಣವಾಗುವುದರ ಜೊತೆಗೆ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಈ ಹಿನ್ನಲೆ ಪಂಚಾಯತಿಗೆ ಭೇಟಿ ಕೊಟ್ಟ ಕಾರ್ಕಳ ಯುವ ಕಾಂಗ್ರೆಸ್ ಮುಖಂಡರು ದೇಶ ಕಂಡ ಮೊದಲ ಭಯೋತ್ಪಾದಕನ ಹೆಸರು ರಸ್ತೆಗೆ ಇಡಲಾಗಿದೆ ಎಂದು ಆರೋಪಿಸಿದರು.

” ಪಂಚಾಯತ್ ಗೂ ಈ ಬೋರ್ಡ್ ಗೂ ಸಂಬಂಧವಿಲ್ಲ ಇದು ಯಾರೋ ಕಿಡಿಗೇಡಿಗಳು ಹಾಕಿದ ನಾಮಫಲಕ. ಪಂಚಾಯತ್ ನಲ್ಲಿ ಈ ಹೆಸರಿಡುವ ಬಗ್ಗೆ ಯಾವುದೇ ನಿರ್ಣಯ ಕೈಗೊಂಡಿಲ್ಲ. ಪಂಚಾಯತ್ ಈ ನಾಮಫಲಕ ಹಾಕಿಲ್ಲ” ಎಂದು ಪಿಡಿಓ ತಿಳಿಸಿದ್ದು , ಹೀಗಾಗಿ ತಕ್ಷಣ ಈ ಬೋರ್ಡನ್ನು ತೆರವುಗೊಳಿಸದಿದ್ದರೆ ಪ್ರತಿಭಟನೆ ಎಚ್ಚರಿಕೆ ನೀಡಿದ್ದೇವೆ ಎಂದು ಕಾಂಗ್ರೆಸಿಗರು ತಿಳಿಸಿದ್ದಾರೆ.

ಇದರ ಬೆನ್ನಲ್ಲೇ ಎಚ್ಚೆತ್ತ ಕಾರ್ಕಳ ಪೊಲೀಸರು, ಬೋಳ ಗ್ರಾಮ ಪಂಚಾಯತ್ ಉಪಸ್ಥಿತಿಯಲ್ಲಿ ಕಾರ್ಯಾಚರಣೆ ನಡೆಸಿ ವಿವಾದಾಸ್ಪದ ಬೋರ್ಡ್ ತೆರವುಗೊಳಿಸಿದ್ದಾರೆ. ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಠಾಣೆ ಎಸ್ ಐ ತೇಜಸ್ವಿ ಭೇಟಿ ನೀಡಿದ್ದಾರೆ.

No Comments

Leave A Comment