Log In
BREAKING NEWS >
ದೆಹಲಿ ಮಹಾನಗರ ಪಾಲಿಕೆ ಆಪ್ ತೆಕ್ಕೆಗೆ; 15 ವರ್ಷಗಳ ಬಿಜೆಪಿ ಆಡಳಿತ ಅಂತ್ಯ, 150ಕ್ಕೂ ಹೆಚ್ಚು ವಾರ್ಡ್ ಗಳಲ್ಲಿ ಆಪ್‌ ಕಮಾಲ್‌...

ಬೆಂಗಳೂರಿನಲ್ಲಿ ಮತ್ತೊಂದು ಆ್ಯಸಿಡ್ ಪ್ರಕರಣ: 2 ತಿಂಗಳ ಅವಧಿಯಲ್ಲಿ 3ನೇ ದಾಳಿ, ಕುಮಾರಸ್ವಾಮಿ ಲೇಔಟ್ ನಲ್ಲಿ ಘಟನೆ

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಆ್ಯಸಿಡ್ ದಾಳಿ ಪ್ರಕರಣ ವರದಿಯಾಗಿದ್ದು, ಮದುವೆಯಾಗಲು ನಿರಾಕರಿಸಿದ ಯುವತಿ ಮೇಲೆ ವ್ಯಕ್ತಿ ಆ್ಯಸಿಡ್ ಎರಚಿದ್ದಾನೆ ಎನ್ನಲಾಗಿದೆ.

ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನ ಸಾರಕ್ಕಿ ಬಳಿ ಈ ಘಟನೆ ನಡೆದಿದ್ದು, ಮಹಿಳೆಯೊಬ್ಬರ ಮೇಲೆ‌ ಆ್ಯಸಿಡ್ ಎರಚಿ ವ್ಯಕ್ತಿ ಪರಾರಿಯಾಗಿದ್ದಾನೆ.  ಪರಿಚಯಸ್ಥನೇ ಕೃತ್ಯ ಎಸಗಿರುವ ಶಂಕೆ ಇದೆ.

ಮೂಲಗಳ ಪ್ರಕಾರ ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ ವ್ಯಕ್ತಿ ಆಕೆ ನಿರಾಕರಿಸಿದ್ದರಿಂದ ಆಕ್ರೋಶಗೊಂಡು ಸ್ಥಳದಲ್ಲೇ ಆ್ಯಸಿಡ್ ಎರಚಿದ್ದಾನೆ ಎಂದು ತಿಳಿದುಬಂದಿದೆ.

ಕುಮಾರಸ್ವಾಮಿ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ಕೃತ್ಯ ನಡೆದಿದ್ದು, ಗಾಯಾಳು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ‘ಮಹಿಳೆ ಜೊತೆ ವೈಮನಸ್ಸು ಹೊಂದಿದ್ದ ಅಹ್ಮದ್ ಎಂಬಾತ, ಆ್ಯಸಿಡ್ ಎರಚಿರುವ ಮಾಹಿತಿ ಇದೆ. ಸದ್ಯ ಮಹಿಳೆ ಆಸ್ಪತ್ರೆಯಲ್ಲಿ ಇದ್ದಾರೆ. ಪ್ರತ್ಯಕ್ಷದರ್ಶಿಗಳು ಹಾಗೂ ಮಹಿಳೆ ಹೇಳಿಕೆ ಪಡೆದು ಮುಂದಿನ ಕ್ರಮ ಜರುಗಿಸಲಾಗುವುದು’ ಎಂದು ಪೊಲೀಸರು ಹೇಳಿದರು.

No Comments

Leave A Comment