Log In
BREAKING NEWS >
ಉಡುಪಿ: ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ಕಾಂಕ್ರೀಟಿಕರಣ ಹಿನ್ನಲೆ : 45 ದಿನ ಘನ ವಾಹನ ಸಂಚಾರಕ್ಕೆ ನಿಷೇಧ- ಡಿಸಿ ಆದೇಶ...

ಪಾಕ್‌ನ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನ

ದುಬೈ:ಜೂ,10. ಪಾಕಿಸ್ಥಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ( 78) ಅವರು ಅನಾರೋಗ್ಯದಿಂದ ಶುಕ್ರವಾರ ನಿಧನ ಹೊಂದಿದ್ದಾರೆ.

ಅನಾರೋಗ್ಯದಿಂದಾಗಿ ದುಬೈನಲ್ಲಿರುವ ಅಮೆರಿಕದ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ನಲ್ಲಿ ಪರ್ವೇಜ್ ಮುಷರಫ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ಮೃತಪಟ್ಟರು. ದುಬೈಗೆ ಈಗಾಗಲೇ ಅವರ ಕುಟುಂಬಸ್ಥರು ಆಗಮಿಸಿದ್ದಾರೆ ಎಂದು ವರದಿಯಾಗಿದೆ.

ಮಿಲಿಟರಿ ಜನರಲ್ ಆಗಿ ಕಾರ್ಯ ನಿರ್ವಹಿಸಿದ್ದ ಮುಷರಫ್ ನಿವೃತ್ತಿಯ ಬಳಿಕ 1999ರಲ್ಲಿ ಫೆಡರಲ್ ಸರ್ಕಾರದ ಯಶಸ್ವಿ ಮಿಲಿಟರಿ ಸ್ವಾಧೀನದ ತರುವಾಯ ಪಾಕಿಸ್ಥಾನದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಇವರು ಪಾಕಿಸ್ತಾನದ ಹತ್ತನೇ ಅಧ್ಯಕ್ಷರಾಗಿ 2008 ರವರೆಗೆ ಕಾರ್ಯ ನಿರ್ವಹಿಸಿದ್ದರು. ಮುಷರಪ್ ಆಸ್ಪತ್ರೆಗೆ ದಾಖಲಾದ ಬಳಿಕ ಸಾವಿನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವದಂತಿಗಳು ಹರಿದಾಡುತ್ತಿದ್ದವು. ಆದರೆ ಇಂದು ಅವರ ನಿಧನವನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.

No Comments

Leave A Comment