BREAKING NEWS >
'ಶಾಸಕರ ಸಂಖ್ಯಾಬಲ ಯಾವ ಕ್ಷಣದಲ್ಲಿಯೂ ಬದಲಾಗಬಹುದು, ಸದನ ಪರೀಕ್ಷೆಯಲ್ಲಿ ಗೆದ್ದೇ ಗೆಲ್ಲುತ್ತೇವೆ': ಸಂಜಯ್ ರಾವತ್...ಅಸ್ಸಾಂ ಪ್ರವಾಹ ಪರಿಸ್ಥಿತಿ ಮತ್ತಷ್ಟು ಗಂಭೀರ; ನೀರಿನಲ್ಲಿ ಮುಳುಗಿದ ಸಿಲ್ಚಾರ್; ಸಾವಿನ ಸಂಖ್ಯೆ 108ಕ್ಕೆ ಏರಿಕೆ...

ನೂತನ ಲೋಕಾಯುಕ್ತ ನ್ಯಾ. ಬಿ.ಎಸ್. ಪಾಟೀಲ್ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಲೋಕಾಯುಕ್ತರಾಗಿ ನೇಮಕಗೊಂಡ ನ್ಯಾಯಾಮೂರ್ತಿ ಬಿ.ಎಸ್. ಪಾಟೀಲ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.

ಬಿಎಸ್ ಪಾಟೀಲ್ ಅವರು ಉಪ ಲೋಕಾಯುಕ್ತರಾಗಿದ್ದ ಸೇವೆ ಸಲ್ಲಿಸಿದ್ದರು. ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆದಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧನೆ ಮಾಡಿದರು.

ಪ್ರಮಾಣ ವಚನ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವರಾದ ವಿ. ಸೋಮಣ್ಣ, ಹಾಲಪ್ಪ ಆಚಾರ್ ಮತ್ತು ಶಾಸಕರು ಉಪಸ್ಥಿತರಿದ್ದರು.

ಲೋಕಾಯುಕ್ತರಾಗಿದ್ದ ನ್ಯಾಯಾಮೂರ್ತಿ ಪಿ. ವಿಶ್ವನಾಥ ಶೆಟ್ಟಿ 2022ರ ಜನವರಿ 27ರಂದು ನಿವೃತ್ತರಾಗಿದ್ದರು. ಅಂದಿನಿಂದ ಖಾಲಿ ಇದ್ದ ಹುದ್ದೆಗೆ 2019ರ ನವೆಂಬರ್ ಉಪ ಲೋಕಾಯುಕ್ತರಾಗಿ ಸೇವೆ ಸಲ್ಲಿಸುತ್ತಿರುವ ನ್ಯಾ. ಬಿ.ಎಸ್. ಪಾಟೀಲ್. ಅವರನ್ನು ನೇಮಕ ಮಾಡಲಾಗಿದೆ

ಸಿದ್ದರಾಮಯ್ಯ ಶುಭಾಶಯ:
ರಾಜ್ಯದ ನೂತನ ಲೋಕಾಯುಕ್ತರಾಗಿ ನೇಮಕಗೊಂಡ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರನ್ನು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಅಭಿನಂದಿಸಿ ಶುಭ ಹಾರೈಸಿದರು.

No Comments

Leave A Comment