BREAKING NEWS >
'ಶಾಸಕರ ಸಂಖ್ಯಾಬಲ ಯಾವ ಕ್ಷಣದಲ್ಲಿಯೂ ಬದಲಾಗಬಹುದು, ಸದನ ಪರೀಕ್ಷೆಯಲ್ಲಿ ಗೆದ್ದೇ ಗೆಲ್ಲುತ್ತೇವೆ': ಸಂಜಯ್ ರಾವತ್...ಅಸ್ಸಾಂ ಪ್ರವಾಹ ಪರಿಸ್ಥಿತಿ ಮತ್ತಷ್ಟು ಗಂಭೀರ; ನೀರಿನಲ್ಲಿ ಮುಳುಗಿದ ಸಿಲ್ಚಾರ್; ಸಾವಿನ ಸಂಖ್ಯೆ 108ಕ್ಕೆ ಏರಿಕೆ...

ಪಿ.ಯು.ಸಿ. 2022 : ವಿದ್ಯೋದಯ ಪದವಿ ಪೂರ್ವ ಕಾಲೇಜು ರಾಜ್ಯ ಮಟ್ಟದ16 Rank- ವಿಜ್ಞಾನದಲ್ಲಿ 100% – ವಾಣಿಜ್ಯದಲ್ಲಿ 98.87%

ಉಡುಪಿಯ ವಿದ್ಯೋದಯ ಟ್ರಸ್ಟ್ (ರಿ.) ನ ಅಂಗಸಂಸ್ಥೆಯಾದ ವಿದ್ಯೋದಯ ಪದವಿಪೂರ್ವ ಕಾಲೇಜು 2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದೆ.

ಈ ಬಾರಿ ವಿಜ್ಞಾನ ವಿಭಾಗದಲ್ಲಿ 322 ವಿದ್ಯಾರ್ಥಿಗಳು ಪರೀಕ್ಷೆಯನ್ನು ತೆಗೆದುಕೊಂಡಿದ್ದು; 214 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು 106 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ 2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ 11 ರಾಜ್ಯ ಮಟ್ಟದ rank:
ವಿಜ್ಞಾನ ವಿಭಾಗದ ವಿದ್ಯಾರ್ಥಿ ಓಂಕಾರ್ ಪ್ರಭು ಹಿಂದಿಯಲ್ಲಿ 100, ಇಂಗ್ಲೀಷ್ 98, ಭೌತಶಾಸ್ತ್ರ 100, ರಸಾಯನ ಶಾಸ್ತ್ರ 98, ಗಣಿತ 100 ಮತ್ತು ಗಣಕವಿಜ್ಞಾನದಲ್ಲಿ 100 ಗಳಿಸುವ ಮೂಲಕ ಒಟ್ಟು 596ಗಳೊಂದಿಗೆ ರಾಜ್ಯ ಮಟ್ಟದಲ್ಲಿ 3ನೇ Rank ಗಳಿಸಿದ್ದಾನೆ.

ನಿಯತಾ 594 ಅಂಕಗಳೊಂದಿಗೆ 5 ನೇ rank , ಲಕ್ಷ್ಮೀ ಪಿ. 592 ಅಂಕಗಳೊಂದಿಗೆ 7ನೇ Rank , ಪ್ರಣ್ಯಮ್ಯ ಆಚಾರ್ಯ, ಕೆ.ಎಸ್. ನಿಹಾರಿಕಾ ನವ್ಯಾ ದಿನೇಶ್ ಶೆಟ್ಟಿ 591 ಅಂಕಗಳೊಂದಿಗೆ 8ನೇ Rank , ಪಾವನ್ ಎ. ಶೆಟ್ಟಿ, ಈಶಾ ಕುಂದರ್, ಅಮರನಾಥ ಭಟ್ ಬಿ. ಮತ್ತು ಚಿನ್ಮಯ ಅಡಿಗ 590 ಅಂಕಗಳೊಂದಿಗೆ 9 ನೇ Rank ಮತ್ತು ಜಾಗೃತಿ ಚಂದ್ರಶೇಖರ್ 589 ಅಂಕಗಳೊಂದಿಗೆ 10ನೇ Rank ಪಡೆದಿರುತ್ತಾರೆ.

ವಾಣಿಜ್ಯ ವಿಭಾಗದಲ್ಲಿ 98.87% ಫಲಿತಾಂಶ ದಾಖಲಾಗಿದ್ದು, ಈ ವರುಷ 177ವಿದ್ಯಾರ್ಥಿಗಳು ಪರೀಕ್ಷೆಯನ್ನು ತೆಗೆದುಕೊಂಡಿದ್ದು; 88ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು 80ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 7 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ 5 ರಾಜ್ಯ ಮಟ್ಟದ Rank
ಮೇಘನಾ ಮೆಂಡನ್ 591 ಅಂಕಗಳೊಂದಿಗೆ 6 ನೇ Rank , ಹಿರಲ್ ಸುಂದರ್ 590 ಅಂಕಗಳೊಂದಿಗೆ 7ನೇ Rank, ದರ್ಶನ್ ಆರ್. ಶೆಟ್ಟಿ ಮತ್ತು ಲರಿಸ್ಸಾ ಹೆಜಲ್ ನಜರೆತ್ 589 ಅಂಕಗಳೊಂದಿಗೆ 8ನೇ Rank ಮತ್ತು ವಿಥಿಕಾ ವಿ. ಶೆಟ್ಟಿ 587 ಅಂಕಗಳೊಂದಿಗೆ 10ನೇ Rank ಪಡೆದಿರುತ್ತಾರೆ ಎಂದು ಕಾಲೇಜು ಪ್ರಾಂಶುಪಾಲರಾದ ಶ್ರೀ ಸಂದೀಪ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದರು.

ಟ್ರಸ್ಟ್‍ನ ಆಡಳಿತ ಮಂಡಳಿ ಮತ್ತು ಕಾಲೇಜು ಉಪನ್ಯಾಸಕ ವೃಂದ ವಿದ್ಯಾರ್ಥಿಗಳನ್ನುಅಭಿನಂದಿಸಿದ್ದಾರೆ.

No Comments

Leave A Comment