ಧರ್ಮಸ್ಥಳ ದೇವಸ್ಥಾನಕ್ಕೆ ಹೊರಟಿದ್ದ ಕಾರು ಅಪಘಾತ : ತಂದೆ ಮತ್ತು ಮಗ ಸ್ಥಳದಲ್ಲೇ ಮೃತ್ಯು : ಮೂವರು ಗಂಭೀರ
ಹಾಸನ : ಕಾರಿನಲ್ಲಿ ಧರ್ಮಸ್ಥಳ ದೇವಸ್ಥಾನಕ್ಕೆ ಪ್ರವಾಸಕ್ಕೆ ಹೊರಟಿದ್ದ ಕುಟುಂಬವೊಂದರ ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ನಡೆದು ಅದರ ಪರಿಣಾಮ ತಂದೆ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ಸಂಭವಿಸಿದೆ.
ಸಾವನ್ನಪ್ಪಿದ ತಂದೆ ತಮಿಳುನಾಡು ಮೂಲದ ಅಂಜನಪ್ಪ,ಮಗ ಕಾರ್ತಿಕ್ ಎಂದು ತಿಳಿದು ಬಂದಿದೆ. ಕೆಲವರು ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಆ ಕಾರಿನಲ್ಲಿ 10 ಜನ ಪ್ರಯಾಣಿಸುತ್ತಿದ್ದರು.ಅದರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.ಮೂವರು ಗಂಭೀರ ಗಾಯಗೊಂಡಿದ್ದಾರೆ. ಐದು ಮಂದಿಗೆ ಗಾಯಗಳಾಗಿವೆ ಎಂದು ತಿಳಿಯಲಾಗಿದೆ.
ಈ ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಅಪಘಾತ ಪ್ರಕರಣ ದಾಖಲಿಸಿಕೊಂಡಿದ್ದಾರೆ.