Log In
BREAKING NEWS >
ಉಡುಪಿ: ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ಕಾಂಕ್ರೀಟಿಕರಣ ಹಿನ್ನಲೆ : 45 ದಿನ ಘನ ವಾಹನ ಸಂಚಾರಕ್ಕೆ ನಿಷೇಧ- ಡಿಸಿ ಆದೇಶ...

ಜಮ್ಮು ಮತ್ತು ಕಾಶ್ಮೀರ: ಇಬ್ಬರು ಭಯೋತ್ಪಾದಕರು ಹತ

ಜಮ್ಮು- ಕಾಶ್ಮೀರ, ಜೂ 27. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನ ಹೊಡೆದುರುಳಿಸಿದ್ದಾರೆ.

ಕುಲ್ಗಾಮ್‌ನ ಟ್ರುಬ್ಜಿ ಪ್ರದೇಶದ ನೌಪೋರಾ-ಖೇರ್ಪೋರಾದಲ್ಲಿ ಎನ್‌ಕೌಂಟರ್ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೊದಲು ಓರ್ವ ಉಗ್ರನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿತ್ತು. ಆ ಬಳಿಕವೂ ನಿರಂತರ ಕಾರ್ಯಾಚರಣೆ ನಡೆದಿದ್ದು, ಮತ್ತೊಬ್ಬನನ್ನೂ ಕೊಲ್ಲುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿದ್ದಾರೆ.

ಸುಮಾರು 150 ಮಂದಿ ಭಯೋತ್ಪಾದಕರು ಗಡಿಯಾಚೆಯಿಂದ ಜಮ್ಮು, ಕಾಶ್ಮೀರದೆಡೆಗೆ ನುಸುಳಲು ಯತ್ನಿಸುತ್ತಿದ್ದು, ಇದಕ್ಕಾಗಿ ಅವರಿಗೆ ತರಬೇತಿಯನ್ನೂ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ಅವರ ಪ್ರಯತ್ನಗಳನ್ನು ವಿಫಲಗೊಳಿಸಲು ಸೇನೆ ಸದಾ ಪ್ರಯತ್ನದಲ್ಲಿ ತೊಡಗಿದೆ ಎಂದು ಹಿರಿಯ ಸೇನಾ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿಯಾಗಿದೆ.

No Comments

Leave A Comment