Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಮಲಯಾಳಂ ನಟ ಎನ್ ಡಿ ಪ್ರಸಾದ್ ಆತ್ಮಹತ್ಯೆ

ತಿರುವನಂತಪುರ, ಜೂ 27 . ನಿವಿನ್ ಪೌಲಿ ಅಭಿನಯದ “ಆಕ್ಷನ್ ಹೀರೋ ಬಿಜು” ಚಿತ್ರದಲ್ಲಿ ಖಳನಾಯಕ ಪಾತ್ರದ ಮೂಲಕ ಹೆಸರುವಾಸಿಯಾದ ಮಲಯಾಳಂ ನಟ ಎನ್ ಡಿ ಪ್ರಸಾದ್ (43) ಕೊಚ್ಚಿ ಬಳಿಯ ಕಲಮಸ್ಸೆರಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಶನಿವಾರ ಸಂಜೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ. ಪತ್ನಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದು. ಅವರಿಗೆ ಇಬ್ಬರು ಮಕ್ಕಳಿದ್ದಾರೆ. 2016ರಲ್ಲಿ ಬಿಡುಗಡೆಯಾಗಿದ್ದ ‘ಆ್ಯಕ್ಷನ್‌ ಹಿರೋ ಬಿಜು‘ ಸಿನಿಮಾದಲ್ಲಿ ಅವರು ಖಳನ ಪಾತ್ರದಲ್ಲಿ ನಟಿಸಿದ್ದರು. ಈ ಸಿನಿಮಾ ಅವರಿಗೆ ಖ್ಯಾತಿ ತಂದುಕೊಟ್ಟಿತ್ತು.

ಖಳನಾಯಕನ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದ ಅವರು ಕೆಲವು ದಿನಗಳಿಂದ ಖಿನ್ನತೆಗೆ ಒಳಗಾಗಿದ್ದರು.. ಡ್ರಗ್ಸ್‌ ಪ್ರಕರಣ ಸೇರಿದಂತೆ ಅವರ ಮೇಲೆ ಹಲವು ಪೊಲೀಸ್‌ ಪ್ರಕರಣಗಳು ದಾಖಲಾಗಿದ್ದವು.

No Comments

Leave A Comment