Log In
BREAKING NEWS >
ಜೂ.26ರ೦ದು ಉಡುಪಿ ಶ್ರೀಪುತ್ತಿಗೆ ಮಠದ ೪ನೇ ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ ಕಾರ್ಯಕ್ರಮ ಜರಗಲಿದೆ.....

ಟೈಲರ್ ತಲೆಕಡಿದ ದುಷ್ಕರ್ಮಿಗಳು: ಉದಯಪುರದಲ್ಲಿ ಪರಿಸ್ಥಿತಿ ಉದ್ವಿಗ್ನ, ಕರ್ಫ್ಯೂ ಜಾರಿ, ರಾಜಸ್ಥಾನದಾದ್ಯಂತ 1 ತಿಂಗಳು ನಿಷೇಧಾಜ್ಞೆ ಜಾರಿ

ನವದೆಹಲಿ: ಪ್ರವಾದಿ ಮೊಹಮ್ಮದರ ಕುರಿತು ಬಿಜೆಪಿ ಮಾಜಿ ವಕ್ತಾರೆ ನೂರುಪ್ ಶರ್ಮಾ ಆಡಿದ್ದ ಮಾತುಗಳನ್ನು ಬೆಂಬಲಿಸಿದ್ದ ವ್ಯಕ್ತಿಯ ಶಿರಚ್ಛೇದ ಮಾಡಿರುವ ಘಟನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದು, ಘಟನೆ ಬಳಿಕ ಉದಯಪುರದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಈ ಹಿನ್ನೆಲೆಯಲ್ಲಿ ಉದಯುಪರದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದ್ದು, ರಾಜಸ್ಥಾನದಾದ್ಯಂತ 1 ತಿಂಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಇಸಿಸ್ ಉಗ್ರರ ಮಾದರಿಯಲ್ಲಿ ವ್ಯಕ್ತಿಯ ಶಿರಚ್ಛೇದ ಮಾಡಿದ ಹತ್ಯೆ ಬಳಿದ ಉಪಯಪುರದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದ್ದು, 24 ಗಂಟೆಗಳ ಕಾಲ ಇಂಟರ್ನೆಟ್ ಸೇವೆಗಳನ್ನು ಜಾರಿ ಮಾಡಲಾಗಿದೆ. ಅಲ್ಲದೆ, ಮುಂದಿನ 30 ದಿನಗಳ ಕಾಲ ರಾಜ್ಯದಾದ್ಯಂತ ಸೆಕ್ಷನ್ 144 ಜಾರಿಗೊಳಿಸಲಾಗಿದೆ ಎಂದು ರಾಜಸ್ಥಾನ ರಾಜ್ಯದ ಮುಖ್ಯ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.

ಮುಂದಿನ ಆದೇಶದವರೆಗೆ ಪೊಲೀಸ್ ಅಧಿಕಾರಿಗಳ ರಜೆಗಳನ್ನು ರದ್ದುಗೊಳಿಸಲಾಗಿದ್ದು, ಯಾವುದೇ ರೀತಿಯ ಆಕ್ಷೇಪಾರ್ಹ ವಿಡಿಯೋ ಪ್ರಸಾರ ಮಾಡಿದರೆ, ಅಂತಹವ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

No Comments

Leave A Comment