Log In
BREAKING NEWS >
ಜೂ.26ರ೦ದು ಉಡುಪಿ ಶ್ರೀಪುತ್ತಿಗೆ ಮಠದ ೪ನೇ ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ ಕಾರ್ಯಕ್ರಮ ಜರಗಲಿದೆ.....

ಸಿಎಂ ಆಗಿ ಫಡ್ನವಿಸ್, ಡಿಸಿಎಂ ಆಗಿ ಶಿಂಧೆ ಇಂದೇ ಪ್ರಮಾಣ ವಚನ ಸ್ವೀಕಾರ; ರಾಜ್ಯಪಾಲರಿಗೆ ಹಕ್ಕು ಮಂಡನೆ!

ಮುಂಬೈ: ಉದ್ಧವ್ ಠಾಕ್ರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಎಂವಿಎ ಸರ್ಕಾರ ಪತನಗೊಂಡಿದ್ದು ಇದರ ಬೆನ್ನಲ್ಲೇ ಶಿವಸೇನೆ ಬಂಡಾಯ ಶಾಸಕರ ತಂಡದ ನಾಯಕತ್ವ ವಹಿಸಿರುವ ಏಕನಾಥ್ ಶಿಂಧೆ ಅವರು ದೇವೇಂದ್ರ ಫಡ್ನವಿಸ್ ಜೊತೆ ಸೇರಿ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.

49 ಶಾಸಕರ ಸಹಿಯುಳ್ಳ ಬೆಂಬಲ ಪತ್ರದೊಂದಿಗೆ ಏಕನಾಥ್ ಶಿಂಧೆ ಅವರು ರಾಜ್ಯಪಾಲರನ್ನು ಭೇಟಿ ಮಾಡಿದ್ದು ಬಿಜೆಪಿಯೊಂದಿಗೆ ಮೈತ್ರಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.

ಇಂದು ಸಂಜೆ 7 ಗಂಟೆಗೆ ರಾಜಭವನದಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು 3ನೇ ಬಾರಿಗೆ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಹಾಗೂ ಡಿಸಿಎಂ ಆಗಿ ಏಕನಾಥ ಶಿಂಧೆ ಪ್ರಮಾಣ ವಚನ ಸ್ವೀಕರಿಸಲಿದ್ದು ನಾಳೆ ಇನ್ನಷ್ಟು ಶಾಸಕರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜಿನಾಮೆ ನೀಡಿದ ಬೆನ್ನಲ್ಲೇ ವಿಶ್ವಾಸ ಮತ ಯಾಚನೆಗಾಗಿ ನಿಗದಿ ಪಡಿಸಲಾಗಿದ್ದ ವಿಶೇಷ ಅಧಿವೇಶನವನ್ನು ಮುಂದೂಡಲಾಗಿದೆ. ರಾಜ್ಯಪಾಲರ ಆದೇಶದಂತೆ ಗುರುವಾರ ನಿಗದಿಯಾಗಿದ್ದ ವಿಶೇಷ ಅಧಿವೇಶನವನ್ನು ಈಗ ಕರೆಯಲಾಗುವುದಿಲ್ಲ ಎಂದು ಮಹಾರಾಷ್ಟ್ರ ವಿಧಾನಸಭೆ ಕಾರ್ಯದರ್ಶಿ ರಾಜೇಂದ್ರ ಭಾಗವತ್ ಅವರು ಎಲ್ಲಾ ರಾಜ್ಯದ ಶಾಸಕರಿಗೆ ತಿಳಿಸಿದ್ದರು.

ಏತನ್ಮಧ್ಯೆ, 106 ಶಾಸಕರನ್ನು ಹೊಂದಿರುವ ಮಹಾರಾಷ್ಟ್ರ ಅಸೆಂಬ್ಲಿಯಲ್ಲಿ ಏಕೈಕ ದೊಡ್ಡ ಪಕ್ಷವಾಗಿರುವ ಪಕ್ಷದೊಂದಿಗೆ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಮರಳಲು ವೇದಿಕೆ ಸಿದ್ಧವಾಗಿದೆ.

No Comments

Leave A Comment