Log In
BREAKING NEWS >
```````ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆಮತ್ತು ಅಭಿಮಾನಿಗಳಿಗೆ ಶ್ರೀಗೌರಿ-ಗಣೇಶ ಹಬ್ಬದ ಶುಭಾಶಯಗಳು````````

ಪ್ರವಾದಿ ಕುರಿತು ಹೇಳಿಕೆ: ಬಿಜೆಪಿ ನಾಯಕಿ ನೂಪುರ್ ಶರ್ಮಾಗೆ ಕೋಲ್ಕತಾ ಪೊಲೀಸರಿಂದ ಲುಕೌಟ್ ಸರ್ಕ್ಯುಲರ್!

ಕೋಲ್ಕತಾ: ಪ್ರವಾದಿ ಮಹಮದ್ ಕುರಿತಂತೆ ಹೇಳಿಕೆ ನೀಡಿದ್ದ ಬಿಜೆಪಿ ನಾಯಕಿ ನೂಪುರ್ ಶರ್ಮಾಗೆ ಕೋಲ್ಕತಾ ಪೊಲೀಸರು ಲುಕೌಟ್ ಸರ್ಕ್ಯುಲರ್ ಜಾರಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಪ್ರವಾದಿ ಮಹಮದ್ ಕುರಿತು ಹೇಳಿಕೆ ನೀಡಿ ವ್ಯಾಪಕ ಟೀಕೆಗೆ ಗುರಿಯಾಗಿ ಅಮಾನತುಗೊಂಡ ಬಿಜೆಪಿ ನಾಯಕ ನೂಪುರ್ ಶರ್ಮಾ ವಿರುದ್ಧ ಕೋಲ್ಕತ್ತಾ ಪೊಲೀಸರು ಲುಕ್ ಔಟ್ ಸುತ್ತೋಲೆ ಹೊರಡಿಸಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತಾದ ಅಮ್ಹೆರ್ಸ್ಟ್ ಮತ್ತು ನರ್ಕೆಲ್ದಂಗ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ದೂರಿಗೆ ಸಂಬಂಧಿಸಿದಂತೆ ಈ ಹಿಂದೆ ಪೊಲೀಸರು 2 ಬಾರಿ ವಿಚಾರಣೆಗೆ ಕರೆದಿದ್ದರು.

ಆದರೆ ನೂಪುರ್ ಶರ್ಮಾ ವಿಚಾರಣೆಗೆ ಗೈರಾದಿದ್ದರು. ಈ ಸಂಬಂಧ ಪೊಲೀಸರು ವಿವರ ಕೋರಿದ್ದರೂ ಕಾರಣಾಂತರಗಳಿಂದ ತಾವು ವಿಚಾರಣೆಗೆ ಹಾಜರಾಗಿರಲಿಲ್ಲ. ಅಲ್ಲದೆ ವಿಚಾರಣೆಗೆ ಹೆಚ್ಚಿನ ಸಮಯ ಕೋರಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಇದೀಗ ಕೋಲ್ಕತಾ ಪೊಲೀಸರು ನೂಪುರ್ ಶರ್ಮಾ ವಿರುದ್ಧ ಲುಕೌಟ್ ಸರ್ಕ್ಯುಲರ್ ಹೊರಡಿಸಿದ್ದಾರೆ.

ಛೀಮಾರಿ ಹಾಕಿದ್ದ ಸುಪ್ರೀಂ ಕೋರ್ಟ್
ಇನ್ನು ತನ್ನ ಹೇಳಿಕೆ ವಿರೋಧಿಸಿ ದೇಶಾದ್ಯಂತ ದಾಖಲಾಗಿರುವ ದೂರುಗಳನ್ನು ಮತ್ತು ವಿಚಾರಣೆಯನ್ನು ದೆಹಲಿಗೆ ವರ್ಗಾವಣೆ ಮಾಡುವಂತೆ ನೂಪುರ್ ಶರ್ಮಾ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ನೂಪುರ್ ಶರ್ಮಾ ಅವರಿಗೆ ಛೀಮಾರಿ ಹಾಕಿತ್ತು. ‘ನೂಪುರ್ ಶರ್ಮ ವಿವಾದಾತ್ಮಕ ಹೇಳಿಕೆ ಇಡೀ ದೇಶಕ್ಕೆ ಬೆಂಕಿ ಹಚ್ಚಿದೆ. ಉದಯ್‌ಪುರದಲ್ಲಿ ಟೈಲರ್‌ನ ಹತ್ಯೆಯಾದ ದುರದೃಷ್ಟಕರ ಘಟನೆಗೆ ಆಕೆಯ ಆಕ್ರೋಶವೇ ಕಾರಣ.

ಆಕೆಯ ಹೇಳಿಕೆ ಹೇಗೆ ಪ್ರಚೋದನೆ ನೀಡಿತು ಎಂಬುದನ್ನು ನಾವು ನೋಡಿದ್ದೇವೆ, ಉದಯಪುರದಲ್ಲಿ ಟೈಲರ್ ಕೊಲೆಯಾದ ದುರದೃಷ್ಟಕರ ಘಟನೆಗೆ ಆಕೆ ಏಕಾಏಕಿ ಕಾರಣವಾಗಿದ್ದಾರೆ. ಶರ್ಮಾ ಹೇಳಿಕೆಗಳು ಆಕೆಯ ಸೊಕ್ಕು ಮತ್ತು ಹಠಮಾರಿತನವನ್ನು ತೋರಿಸುತ್ತದೆ, ಆಕೆ ಪಕ್ಷದ ವಕ್ತಾರರಾಗಿರಬಹುದು, ಆದರೆ ಈ ನೆಲದ ಕಾನೂನನ್ನು ಗೌರವಿಸದೆ ಯಾವುದೇ ಹೇಳಿಕೆ ನೀಡಬಾರದು. ಆಕೆ ಇಡೀ ದೇಶದ ಕ್ಷಮೆ ಕೇಳಬೇಕು ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದರು.

ಅಲ್ಲದೆ ಅವರ ಅರ್ಜಿಯನ್ನು ವಜಾಗೊಳಿಸಿದ ಕೋರ್ಟ್, ನೂಪುರ್ ಶರ್ಮಾ ಹೈಕೋರ್ಟ್​ಗೆ ಹೋಗಿ ಅರ್ಜಿ ಸಲ್ಲಿಸಲಿ. ಶರ್ಮಾಗೆ ದೆಹಲಿ ಪೊಲೀಸರು ರೆಡ್ ಕಾರ್ಪೆಟ್ ಸ್ವಾಗತ ಕೋರಿರಬೇಕು. ಇಷ್ಟೊಂದು ಎಫ್.ಐ.ಆರ್. ದಾಖಲಾದರೂ ದೆಹಲಿ ಪೊಲೀಸರು ಏಕೆ ಕ್ರಮ ಕೈಗೊಂಡಿಲ್ಲ? ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.

No Comments

Leave A Comment