
ಇಬ್ಬರು ಶಸ್ತ್ರಸಜ್ಜಿತ ಉಗ್ರರನ್ನು ಹೆಡೆಮುರಿ ಕಟ್ಟಿ ಪೊಲೀಸರಿಗೆ ಒಪ್ಪಿಸಿದ ಜಮ್ಮು-ಕಾಶ್ಮೀರ ಗ್ರಾಮಸ್ಥರು!
ಶ್ರೀನಗರ: ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಸಂಘಟನೆಯ ಇಬ್ಬರು ಶಸ್ತ್ರಧಾರಿ ಉಗ್ರರನ್ನು ಗ್ರಾಮಸ್ಥರೇ ಹೆಡೆಮುರಿಕಟ್ಟಿ ಪೊಲೀಸರಿಗೆ ಒಪ್ಪಿಸಿದ ಘಟನೆ ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ನಡೆದಿದೆ.
ಪೊಲೀಸರಿಗೆ ಒಪ್ಪಿಸಿದ ಇಬ್ಬರು ಉಗ್ರರ ಪೈಕಿ ಓರ್ವ ಉಗ್ರ ಎಲ್ಇಟಿ ಸಂಘಟನೆಯ ಕಮಾಂಡ್ ಆಗಿದ್ದು ಹಲವು ಪ್ರಕರಾಣಗಳಲ್ಲಿ ಬೇಕಾಗಿದ್ದ ಉಗ್ರನಾಗಿದ್ದಾನೆ.
ರಜೌರಿ ಜಿಲ್ಲೆಯ ನಿವಾಸಿ ಆಗಿದ್ದ ಎಲ್ಇಟಿ ಕಮಾಂಡರ್ ತಲಿಬ್ ಹುಸೇನ್ ಹಾಗೂ ಜಿಲ್ಲೆಯಲ್ಲಿ ಇತ್ತೀಚಿನ ಐಇಡಿ ಸ್ಫೋಟ ಪ್ರಕರಣದ ಮಾಸ್ಟರ್ ಮೈಂಡ್ ಆಗಿದ್ದ ಫೈಜಲ್ ಅಹ್ಮದ್ ದರ್ ನ್ನು ತುಕ್ಸಾನ್ ಗ್ರಾಮದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬಂಧಿತರಿಂದ ಎರಡು ಎಕೆ ಅಸಾಲ್ಟ್ ರೈಫಲ್ಸ್, 7 ಗ್ರೆನೇಡ್ ಗಳು, ಒಂದು ಪಿಸ್ತೂಲ್ ನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಗ್ರಾಮಸ್ಥರ ಧೈರ್ಯ, ಸಾಹಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಡಿಜಿಪಿ ದಲ್ಬಿರ್ ಸಿಂಗ್ ಗ್ರಾಮಸ್ಥರಿಗೆ 2 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದ್ದಾರೆ.