Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಕರಾವಳಿ ಕರ್ನಾಟಕ, ಗೋವಾದಲ್ಲಿ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆ-ಪ್ರವಾಹ ಭೀತಿ ಸಾಧ್ಯತೆ

ಬೆಂಗಳೂರು:ಜು 05. ಕರಾವಳಿ ಕರ್ನಾಟಕ, ಗೋವಾ ಭಾಗಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗಲಿದ್ದು, ಹಠಾತ್ ಪ್ರವಾಹ ಭೀತಿಯೂ ಎದುರಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರಾವಳಿ ಕರ್ನಾಟಕ, ಕೊಂಕಣ ಮತ್ತು ಗೋವಾ ಭಾಗಗಳಲ್ಲಿ ಮಳೆಯಿಂದಾಗಿ ಪ್ರವಾಹ ಭೀತಿ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ನದಿಪಾತ್ರ, ಸಮುದ್ರ ತೀರಗಳಲ್ಲಿ ಹಾಗೂ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದಿರಬೇಕು ಎಂದು ಇಲಾಖೆ ತಿಳಿಸಿರುವುದಾಗಿ ವರದಿಯಾಗಿದೆ.

ಕರಾವಳಿ ಕರ್ನಾಟಕ, ಗೋವಾ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುಂದುವರಿಯಲಿದೆ. ಗುಜರಾತ್, ಕೊಂಕಣ್ ಮತ್ತು ಗೋವಾ, ಮಧ್ಯ ಮಹಾರಾಷ್ಟ್ರ, ಮಾರಥ್ವಾಡ, ತೆಲಂಗಾಣ, ಕರಾವಳಿ ಕರ್ನಾಟಕ, ಕೇರಳ, ಮಾಹೆ, ಮಧ್ಯಪ್ರದೇಶ, ವಿದರ್ಭ, ಛತ್ತೀಸ್‌ಘಡ ಮತ್ತು ಒಡಿಶಾ ರಾಜ್ಯಗಳಲ್ಲಿ ಐದು ದಿನಗಳ ಕಾಲ ಮಳೆಯಾಗಲಿದೆ. ಜುಲೈ 7 ಮತ್ತು 8ರಂದು ಕರಾವಳಿ ಕರ್ನಾಟಕ ಭಾಗದಲ್ಲಿ ಮಳೆ ಹೆಚ್ಚಿರಲಿದೆ.

ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಭೂಕುಸಿತ, ಗುಡ್ಡಕುಸಿತದಂತಹ ಅಪಾಯಗಳು ಎದುರಾಗುವ ಸಾಧ್ಯತೆ ಇದೆ. ಹೀಗಾಗಿ ಈಗಿಂದಲೇ ಎಚ್ಚರಿಕೆ ವಹಿಸಿಕೊಳ್ಳಬೇಕು. ತಗ್ಗು ಪ್ರದೇಶ, ನದಿ, ಸಮುದ್ರ ಬದಿಯಲ್ಲಿ ವಾಸಿಸುವವರು ಸೂಕ್ತ ಮುನ್ನೆಚ್ಚರಿಕೆ ವಹಿಸಿಕೊಳ್ಳುವುದರೊಂದಿಗೆ ಯಾವುದೇ ಅಪಾಯ ಎದುರಾಗದಂತೆ ನೋಡಿಕೊಳ್ಳಬೇಕು ಎಂದು ಇಲಾಖೆ ಮನವಿ ಮಾಡಿದೆ.

No Comments

Leave A Comment