Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿನ 94ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ದೀಪ ಪ್ರಜ್ವಲನೆಯೊ೦ದಿಗೆ ವಿದ್ಯುಕ್ತ ಚಾಲನೆ.......ಡಿ.2ರ ಶುಕ್ರವಾರದ೦ದು ಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಪರ್ಯಾಯ ಮಹೋತ್ಸವಕ್ಕೆ ಬಾಳೆಮುಹೂರ್ತ ಕಾರ್ಯಕ್ರಮವು 8ಗ೦ಟೆಗೆ ಪುತ್ತಿಗೆ ಮಠದ ಆವರಣದಲ್ಲಿ ಜರಗಲಿದೆ...

ಚಂದ್ರಶೇಖರ್ ಗುರೂಜಿ ಹಂತಕ ಮಹಾಂತೇಶ್ ಶಿರೂರ , ಮಂಜುನಾಥ್ ದುಮ್ಮವಾಡ ಸೇರಿ ಮಹಾಂತೇಶ್ ಪತ್ನಿ ಪೊಲೀಸರ ವಶಕ್ಕೆ-ಆಸ್ತಿವಿವಾದವೇ ಕೊಲೆಗೆ ಕಾರಣ

ಹುಬ್ಬಳ್ಳಿ: ಜುಲೈ 5: ಹುಬ್ಬಳ್ಳಿಯಲ್ಲಿ ಸರಳವಾಸ್ತು ಖ್ಯಾತಿಯ ಡಾ. ಚಂದ್ರಶೇಖರ್ ಗುರೂಜಿ ಹತ್ಯೆಯ ಹಂತಕರು ಯಾರು? ಎಂಬುದರ ಗುರುತನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಸರಳವಾಸ್ತು ಸಂಸ್ಥೆಯಲ್ಲಿ ಉದ್ಯೋಗ ಮಾಡುತ್ತಿದ್ದವರೇ ಗುರೂಜಿಯ ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಮಹಾಂತೇಶ್ ಶಿರೂರ , ಮಂಜುನಾಥ್ ದುಮ್ಮವಾಡ ಎಂಬುವವರೇ ಹಂತಕರು ಎಂದು ತಿಳಿದು ಬಂದಿದೆ. ಇಬ್ಬರೂ ಆರೋಪಿಗಳು ಧಾರವಾಡ ಜಿಲ್ಲೆಯ ತಲಘಟಗಿ ತಾಲೂಕಿನ ದುಮ್ಮವಾಡ ನಿವಾಸಿಗಳು ಎಂದು ತಿಳಿದು ಬಂದಿದೆ.

ನಗರದ ಉಣಿಕಲ್ ರಸ್ತೆಯಲ್ಲಿರುವ ಪ್ರೆಸಿಡೆಂಟ್ ಹೋಟೆಲ್‌ನಲ್ಲಿ ಗುರೂಜಿ ಹತ್ಯೆ ಮಾಡಿದವರ ಬಂಧನಕ್ಕೆ ಎಸಿಪಿ ವಿನೋದ್ ಮುಕ್ತೇದಾರ್ ನೇತೃತ್ವದಲ್ಲಿ ಐದು ತಂಡಗಳನ್ನು ರಚಿಸಲಾಗಿದೆ. ಹುಬ್ಬಳ್ಳಿಯ ಎಂಟೂ ದಿಕ್ಕುಗಳಲ್ಲಿ ಪೊಲೀಸ್ ನಾಕಾಬಂಧಿಯನ್ನು ಹಾಕಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ಮಾಹಿತಿ ನೀಡಿದ್ದಾರೆ.

ಸರಳವಾಸ್ತು ಗುರೂಜಿ ಹತ್ಯೆಯ ಹಿಂದೆ ಮೂವರ ಹೆಸರು
ಹುಬ್ಬಳ್ಳಿಯಲ್ಲಿ ನಡೆದ ಡಾ. ಚಂದ್ರಶೇಖರ್ ಗುರೂಜಿ ಹತ್ಯೆಯ ಹಿಂದೆ ಮೂವರು ಆರೋಪಿಗಳ ಹೆಸರು ಕೇಳಿ ಬಂದಿದೆ. ಈ ಮೂವರೂ ಆರೋಪಿಗಳು ಗುರೂಜಿ ಆಪ್ತ ವಲಯದಲ್ಲೇ ಗುರುತಿಸಿಕೊಂಡವರು ಎಂಬುದು ಪ್ರಾಥಮಿಕ ತನಿಖೆ ವೇಳೆ ಗೊತ್ತಾಗಿದೆ. ಆರೋಪಿ ಮಹಾಂತೇಶ್ ಶಿರೋಳ್, ಮಂಜುನಾಥ್ ದುಮ್ಮವಾಡ ಮತ್ತು ಮಹಾಂತೇಶ್ ಶಿರೋಳ್ ಪತ್ನಿ ವನಜಾಕ್ಷಿಯ ಆರೋಪಿಗಳು ಎಂದು ಗುರುತಿಸಲಾಗಿದೆ. ಧಾರವಾಡದ ಗೋಕುಲ ರಸ್ತೆ ಠಾಣೆಯ ಪೊಲೀಸರು ಈಗಾಗಲೇ ಆರೋಪಿ ವನಜಾಕ್ಷಿಯನ್ನು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಉಳಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಗುರೂಜಿ ಹಂತಕರ ಸೆರೆಗೆ ಐದು ತಂಡ ರಚಿಸಿದ ಪೊಲೀಸರು
ಡಾ. ಚಂದ್ರಶೇಖರ್ ಗುರೂಜಿ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸುವುದಕ್ಕೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಎಸಿಪಿ ವಿನೋದ್ ಮುಕ್ತೇದಾರ್ ನೇತೃತ್ವದಲ್ಲಿ ಐದು ತಂಡಗಳನ್ನು ರಚನೆ ಮಾಡಲಾಗಿದೆ. ಹುಬ್ಬಳ್ಳಿಯ ಎಂಟೂ ದಿಕ್ಕಿನಲ್ಲಿ ನಾಕಾಬಂಧಿ ಹಾಕಲಾಗಿದೆ. ಅಕ್ಕ-ಪಕ್ಕದ ಜಿಲ್ಲೆಗಳ ಪೊಲೀಸರಿಗೂ ಮಾಹಿತಿ ರವಾನೆ ಮಾಡಲಾಗಿದೆ ಎಂದು ಹುಬ್ಬಳ್ಳಿಯ ಪೊಲೀಸ್ ಕಮಿಷನರ್ ಲಾಬೂರಾಮ್ ಮಾಹಿತಿ ನೀಡಿದ್ದಾರೆ.

ಗುರೂಜಿ ಹತ್ಯೆ ತೀರಾ ಅಮಾನುಷ ಎಂದ ಅರಗ ಜ್ಞಾನೇಂದ್ರ
ಹುಬ್ಬಳ್ಳಿಯಲ್ಲಿ ನಡೆದಿರುವ ಡಾ. ಚಂದ್ರಶೇಖರ್ ಗೂರೂಜಿ ಹತ್ಯೆಯ ಹಿಂದಿನ ಅಸಲಿ ಕಾರಣವೇನು ಎಂಬುದರ ಬಗ್ಗೆ ಇನ್ನೂ ಗೊತ್ತಾಗಿಲ್ಲ. ಈ ಘಟನೆಯ ಕುರಿತು ಕಮಿಷನರ್ ಜೊತೆಗೆ ಮಾತನಾಡಿದ್ದೇನೆ. ಹಂತಕರು ಯಾರೇ ಆಗಿದ್ದರೂ, ಕಠಿಣ ಕಾನೂನು ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಗುರೂಜಿ ಹತ್ಯೆಯನ್ನು ಖಂಡಿಸಿದ ಅವರು, ಇದು ತೀರಾ ಅಮಾನುಷ ಘಟನೆಯಾಗಿದೆ. ಮನುಷ್ಯರು ಈ ರೀತಿಯ ಕೃತ್ಯವನ್ನು ನಡೆಸಲು ಸಾಧ್ಯವಿಲ್ಲ, ಇದೊಂದು ರಾಕ್ಷಸಿ ಕೃತ್ಯ ಎಂದು ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಡಾ. ಚಂದ್ರಶೇಖರ್ ಗುರೂಜಿ ಹತ್ಯೆ ಹೇಗಾಯ್ತು?
ಹುಬ್ಬಳ್ಳಿ ಉಣಕಲ್ ರಸ್ತೆಯಲ್ಲಿ ಇರುವ ಪ್ರೆಸಿಡೆಂಟ್ ಹೋಟೆಲ್‌ನಲ್ಲಿ ಮಧ್ಯಾಹ್ನ 12.23ರ ಹೊತ್ತಿಗೆ ಸರಳವಾಸ್ತು ಖ್ಯಾತಿಯ ಡಾ. ಚಂದ್ರಶೇಖರ್ ಗುರೂಜಿಯ ಹತ್ಯೆ ನಡೆಯಿತು. ಭಕ್ತರ ಸೋಗಿನಲ್ಲಿ ಬಂದಿದ್ದ ಆರೋಪಿಗಳು ರಿಸೆಪ್ಷನ್ ಬಳಿ ಆಗಮಿಸುವಂತೆ ಗುರೂಜಿಗೆ ಕರೆ ಮಾಡಿದ್ದಾರೆ. 30 ನಿಮಿಷಗಳ ನಂತರ ಸ್ಥಳಕ್ಕೆ ಗುರೂಜಿ ಆಗಮಿಸಿದರು. ಒಬ್ಬರು ಅವರ ಕಾಲಿಗೆ ಬಿದ್ದು ನಮಿಸುತ್ತಿದ್ದ ಸಂದರ್ಭದಲ್ಲಿ ಮತ್ತೊಬ್ಬರು ಗುರೂಜಿ ಎದೆಗೆ ಚಾಕುವಿನಿಂದ ಇರಿದಿದ್ದಾರೆ. ನೋಡ ನೋಡುತ್ತಿದ್ದಂತೆ ಇಬ್ಬರೂ ಚಾಕುವಿನಿಂದ ಬರ್ಬರವಾಗಿ ಇರಿಯುವುದಕ್ಕೆ ಪ್ರಾರಂಭಿಸಿದ್ದಾರೆ. 40 ಸೆಕೆಂಡುಗಳಲ್ಲಿ 60 ಬಾರಿ ಗುರೂಜಿಯನ್ನು ಚುಚ್ಚಿ ಕೊಂದಿದ್ದಾರೆ.

No Comments

Leave A Comment