ಉಡುಪಿ : ಮುಂಬೈನ ಜಿಯೋ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ವಿ.ಎಲ್.ಸಿ.ಸಿ ಫೆಮಿನಾ ಇಂಡಿಯಾ 2022 ಸ್ಪರ್ಧೆಯ ಗ್ರಾಂಡ್ ಫಿನಾಲೆಯಲ್ಲಿ ಕಾಪು ತಾಲೂಕಿನ ಇನ್ನಂಜೆಯ ಮಡುಂಬುವಿನ ಸಿನಿ ಶೆಟ್ಟಿ ಅವರು ಮಿಸ್ ಇಂಡಿಯಾ 2022 ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.
ಇವರು ಮುಂಬೈಯ ನಿವಾಸಿಯಾಗಿದ್ದು ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು.
ಪ್ರಸ್ತುತ ಚಾರ್ಟೆಡ್ ಫೈನಾನ್ಸಿಯಲ್ ಅನಾಲಿಸ್ಟ್ ಕೋರ್ಸ್ ನ ವ್ಯಾಸಂಗ ನಡೆಸುತ್ತಿರುವ ಇವರು 71ನೇ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಇವರು ಕಾಪು ತಾಲೂಕಿನ ಇನ್ನಂಜೆಯ ಮಡುಂಬುವಿನ ಉದ್ಯಮಿ ಸದಾನಂದ ಶೆಟ್ಟಿ ಮತ್ತು ಹೇಮ ಶೆಟ್ಟಿ ದಂಪತಿಗಳ ಪುತ್ರಿ.