Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿನ 94ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ದೀಪ ಪ್ರಜ್ವಲನೆಯೊ೦ದಿಗೆ ವಿದ್ಯುಕ್ತ ಚಾಲನೆ.......ಡಿ.2ರ ಶುಕ್ರವಾರದ೦ದು ಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಪರ್ಯಾಯ ಮಹೋತ್ಸವಕ್ಕೆ ಬಾಳೆಮುಹೂರ್ತ ಕಾರ್ಯಕ್ರಮವು 8ಗ೦ಟೆಗೆ ಪುತ್ತಿಗೆ ಮಠದ ಆವರಣದಲ್ಲಿ ಜರಗಲಿದೆ...

ಉಡುಪಿ:ಫೇಸ್ ಬುಕ್ ಮೂಲಕ ಸರ್ಕಾರಿ ಉದ್ಯೋಗ ನೀಡುವುದಾಗಿ ನಂಬಿಸಿ ಹಣ ವಸೂಲಿ ಮಾಡುತ್ತಿದ್ದಾತನ ಬಂಧನ

ಉಡುಪಿ: ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ಮುಖಾಂತರ ಸಾರ್ವಜನಿಕರನ್ನು ಸಂಪರ್ಕಿಸಿ, ಸರ್ಕಾರಿ ಉದ್ಯೋಗ ನೀಡುವುದಾಗಿ ನಂಬಿಸಿ, ಅವರಿಂದ ಹಣ ಮತ್ತು ಲ್ಯಾಪ್ ಟಾಪ್ ಗಳನ್ನು ಪಡೆದು, ವಂಚಿಸುತ್ತಿದ್ದ ಓರ್ವನನ್ನ ಉಡುಪಿ ಪೊಲೀಸರು ಬಂಧಿಸಿದ್ದಾರೆ.

ಕಾಪು ನಿವಾಸಿ ನಿಶಾಂತ ಎಸ್. ಕುಮಾರ್ (21) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

ಈತ ಫೇಸ್ ಬುಕ್ ಮೂಲ ಜನರನ್ನು ಸಂಪರ್ಕಿಸಿ ಸರ್ಕಾರಿ ಉದ್ಯೋಗ ನೀಡುವುದಾಗಿ ನಂಬಿಸಿ, ಅವರಿಂದ ಹಣ ಮತ್ತು ಲ್ಯಾಪ್ ಟಾಪ್ ಗಳನ್ನು ಪಡೆದು, ವಂಚಿಸುತ್ತಿದ್ದ ಎಂದು ತಿಳಿದುಬಂದಿದೆ.

ಪೊಲೀಸರು ಆರೋಪಿಯಿಂದ ಕೃತ್ಯಕ್ಕೆ ಬಳಸಿದ 7 ಲ್ಯಾಪ್ ಟಾಪ್ ಹಾಗೂ 1 ಮೊಬೈಲ್ ಹ್ಯಾಂಡ್ ಸೆಟ್ ವಶಪಡಿಸಿಕೊಂಡಿದ್ದಾರೆ.

No Comments

Leave A Comment