Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿನ 94ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ದೀಪ ಪ್ರಜ್ವಲನೆಯೊ೦ದಿಗೆ ವಿದ್ಯುಕ್ತ ಚಾಲನೆ.......ಡಿ.2ರ ಶುಕ್ರವಾರದ೦ದು ಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಪರ್ಯಾಯ ಮಹೋತ್ಸವಕ್ಕೆ ಬಾಳೆಮುಹೂರ್ತ ಕಾರ್ಯಕ್ರಮವು 8ಗ೦ಟೆಗೆ ಪುತ್ತಿಗೆ ಮಠದ ಆವರಣದಲ್ಲಿ ಜರಗಲಿದೆ...

ಸ್ನೇಹಿತರಿಬ್ಬರಿಂದ ಯುವಕನ ಬರ್ಬರ ಹತ್ಯೆ

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಕೈಕಂಬದ ಸಮೀಪ ಯುವಕನೋರ್ವನನ್ನು ಆತನ ಸ್ನೇಹಿತರಿಬ್ಬರು ಸೇರಿ ಕತ್ತಿಯಿಂದ ಕಡಿದು ಕೊಲೆ ನಡೆಸಿದ ಘಟನೆ ನಿನ್ನೆ ಮಧ್ಯರಾತ್ರಿ ವೇಳೆ ಕೈಕಂಬದ ತಲಪಾಡಿ ಎಂಬಲ್ಲಿ ಸಂಭವಿಸಿದೆ.

ಹತ್ಯೆಯಾದ ಯುವಕ ಶಾಂತಿ ಅಂಗಡಿ ನಿವಾಸಿ ಮಹಮ್ಮದ್ ಆಶಿಫ್ (29) ಎಂದು ತಿಳಿದು ಬಂದಿದೆ.

ಅತನ ಸ್ನೇಹಿತರಾದ ನೌಫಾಲ್ ಮತ್ತು ಇನ್ನೋರ್ವ ಈ ಕೃತ್ಯ ನಡೆಸಿದ್ದಾರೆ ಎಂದು ಮಾಹಿತಿ ತಿಳಿಯಲಾಗಿದೆ.

ಇವರು ಗಾಂಜ ಗಿರಾಕಿಗಳಾಗಿದ್ದು, ತಲಪಾಡಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಹೊಟೇಲ್ ಒಂದರ ಸಮೀಪದಲ್ಲಿ ರಾತ್ರಿ ಒಂದು ಗಂಟೆಯ ವೇಳೆ ಮಾತಿಗೆ ಮಾತು ಬೆಳೆದು ಗಾಂಜ ವಿಚಾರದಲ್ಲಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ.

ಮೂವರು ಗಾಂಜ ಸೇವಕರು ಮತ್ತು ಮಾರಾಟಗಾರರು ಎಂಬ ಮಾತುಗಳು ಸ್ಥಳೀಯರಿಂದ ಹೇಳಲಾಗುತ್ತಿದ್ದು, ಇತ್ತೀಚಿಗೆ ಗಾಂಜಾ ವಿಚಾರದಲ್ಲಿ ಗಲಾಟೆಗಳು ನಡೆಯುವುದು ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ.

ಪೊಲೀಸರು ಗಾಂಜಾ ವಿಚಾರದಲ್ಲಿ ಹೆಚ್ಚಿನ ಗಮನ ಹರಿಸಿ ಬಂಟ್ವಾಳದಲ್ಲಿ ಶಾಂತಿ ನೆಲೆಸಲು ಹೆಚ್ಚಿನ ನಿಗಾ ವಹಿಸುವ ಅಗತ್ಯವಿದೆ ಎಂದು ಸಾರ್ವಜನಿಕ ವಲಯದಲ್ಲಿ ಮಾತು‌ ಕೇಳಿಬರುತ್ತಿವೆ.

ಈ ಘಟನಾ ಸ್ಥಳಕ್ಕೆ ಪೊಲೀಸ್ ಇನ್ಸ್ ಪೆಕ್ಟರ್ ವಿವೇಕಾನಂದ, ಎಸ್.ಐ.ಅವಿನಾಶ್ ಹಾಗೂ ಸಿಬ್ಬಂದಿಗಳು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಂಟ್ವಾಳ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

No Comments

Leave A Comment