Log In
BREAKING NEWS >
ಫೆ.14 ಮತ್ತು 15ರ೦ದು ಉಡುಪಿಯ ಪಣಿಯಾಡಿಯ ಶ್ರೀಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭ ದೇವಸ್ಥಾನದ ಧ್ವಜಸ್ತ೦ಭದ ಸ್ಥಾಪನಾ ಕಾರ್ಯಕ್ರಮವು ನಡೆಯಲಿದೆ.....

ಗಾಂಜಾ ಹಾಗೂ ಎಂಡಿಎಂಎ ಡ್ರಗ್ಸ್ ಮಾರಾಟ : ಪೊಲೀಸರಿಂದ ಇಬ್ಬರ ಬಂಧನ

ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಕಾಯ್ಕಿಣಿ ಅವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕೆ. ಅವರ ಉಪಸ್ಥಿತಿಯಲ್ಲಿ ಗಾಂಜಾ ಹಾಗೂ ಎಂಡಿಎಂಎ ಡ್ರಗ್ಸ್ ಸಹಿತ ಇಬ್ಬರನ್ನು ಬಂಧಿಸಿರುವ ಘಟನೆ ಬೈಂದೂರು ರಾಹುತನಕಟ್ಟೆ ಎಂಬಲ್ಲಿ ಸಂಭವಿಸಿದೆ.

ಬಂಧಿತ ಆರೋಪಿಗಳು ಭಟ್ಕಳ ನಿವಾಸಿ ಅಬ್ದುಲ್ ರಹ್ಮಾನ್ (31), ಶಿರ್ವ ನಿವಾಸಿ ಅಬ್ದುಲ್ ಸಮದ್ (30) ಎಂದು ತಿಳಿದು ಬಂದಿದೆ.

ಇವರಿಬ್ಬರು ಈ ಮಾದಕ ವಸ್ತುವನ್ನು ಸಲೀಮ್ ಮಂಚಿ ಎನ್ನುವಾತನಿಂದ ಖರೀದಿಸಿ ತಂದಿದ್ದಾಗಿ ತನಿಖೆ ವೇಳೆ ಬಾಯ್ದಿಟ್ಟಿದ್ದಾರೆ.

ಆರೋಪಿಗಳಿಬ್ಬರಿಂದ 30 ಗ್ರಾಂ ತೂಕದ 25 ಸಾವಿರ ರೂ. ಮೌಲ್ಯದ ಗಾಂಜಾ, 11.420 ಗ್ರಾಂ ತೂಕದ 11 ಸಾವಿರ ರೂ. ಮೌಲ್ಯದ ಎಂಡಿಎಂಎ ಹರಳು, 4 ಲಕ್ಷ ಮೌಲ್ಯದ ಕಾರು, ಮೊಬೈಲ್ ಫೋನುಗಳ, ತೂಕದ ಮೆಷಿನ್, 1080 ರೂ. ನಗದು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಇಬ್ಬರು ಹಾಗೂ ಮಂಚಿ ಸಲೀಮ್ ಸೇರಿ ಮೂರು ಮಂದಿ ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

No Comments

Leave A Comment