Log In
BREAKING NEWS >
ಉಡುಪಿ ನಗರದಲ್ಲಿ ರಿಕ್ಷಾ ಮೀಟರ್ ಕನಿಷ್ಠದರ ರೂ.40/-ಫಿಕ್ಸ್:ಕಿ.ಮೀಟರ್ ಗೆ ರೂ.20/-ಜಾರಿಗೆ ಕ್ಷಣಗಣನೆ…

ಹೆಬ್ಬಾವನ್ನು ಕೊಂದು ಅರಣ್ಯ ಸಮಿತಿಯ ಬಾಗಿಲಿಗೆ ನೇತು ಹಾಕಿದ್ದ ಆರೋಪಿಗಳ ಬಂಧನ

ಪುತ್ತೂರು: ಮನೆಗೆ ಬಂದಿದ್ದ ಹೆಬ್ಬಾವೊಂದನ್ನು ಕೊಂದು ಪೆರ್ಲಂಪಾಡಿಯಲ್ಲಿರುವ ಗ್ರಾಮ ಅರಣ್ಯ ಸಮಿತಿ ಕಟ್ಟಡದ ಬಾಗಿಲಿಗೆ ಕಟ್ಟಿ ಹಾಕಿದ್ದ ಇಬ್ಬರು ಆರೋಪಿಗಳನ್ನು ಪುತ್ತೂರು ಅರಣ್ಯ ಇಲಾಖೆಯ ಸಿಬ್ಬಂದಿಗಳು ಬಂಧಿಸಿದ್ದಾರೆ.

 ಬಂಧಿತ ಆರೋಪಿಗಳು ತಾಲೂಕಿನ ಕೊಳ್ತಿಗೆ ಗ್ರಾಮದ ಶೇಡಿಗುರಿ ನಿವಾಸಿ ಧನಂಜಯ ಮತ್ತು ಜಯ ಎಂದು ಗುರುತಿಸಲಾಗಿದೆ. ಹೆಬ್ಬಾವನ್ನು ಕೊಲ್ಲುವುದು 1972ರ ವನ್ಯಜೀವಿ ಸಂರಕ್ಷಣಾ ಕಾಯ್ದೆ ಪ್ರಕಾರ ಜಾಮೀನು ರಹಿತ ಅಪರಾಧವಾಗಿರುವ ಕಾರಣ ಪುತ್ತೂರು ಅರಣ್ಯ ಇಲಾಖೆ ಸಿಬ್ಬಂದಿ ಪ್ರಕರಣ ದಾಖಲಿಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಇದೀಗ ನ್ಯಾಯಾಲಯವು ಜು.15ರವರೆಗೆ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

No Comments

Leave A Comment