ಕಡಬ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ನಾಲ್ವರಿಗೆ ಗಾಯ, ಇಬ್ಬರು ಗಂಭೀರ
ಕಡಬ:ಜು 07 : ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಸೆಲೆರಿಯೊ ಕಾರೊಂದು ಪಲ್ಟಿಯಾಗಿ ನಾಲ್ವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಹಳೆ ನಿಲ್ದಾಣದ ಬಳಿ ನಡೆದಿದೆ.
ಗಾಯಗೊಂಡವರನ್ನು ಸುಬ್ರಹ್ಮಣ್ಯದ ಕುಲ್ಕುಂದ ನಿವಾಸಿಗಳಾದ ಮಂಜುನಾಥ್, ಕಿರಣ್, ಗಿರೀಶ್ ಮತ್ತು ಕೃಷ್ಣಮೂರ್ತಿ ಎಂದು ಗುರುತಿಸಲಾಗಿದೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ಗಾಯಾಳುಗಳಿಗೆ ಕಡಬದ ಸಮುದಾಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.