Log In
BREAKING NEWS >
```````ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆಮತ್ತು ಅಭಿಮಾನಿಗಳಿಗೆ ಶ್ರೀಗೌರಿ-ಗಣೇಶ ಹಬ್ಬದ ಶುಭಾಶಯಗಳು````````

ಪಂಜಾಬ್ ಸಿಎಂ ಭಗವಂತ್ ಮಾನ್‌‌ರೊಂದಿಗೆ ಸಪ್ತಪದಿ ತುಳಿದ ಗುರ್ಪ್ರೀತ್ ಕೌರ್‌

ಪಂಜಾಬ್:ಜು 07. ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಎರಡನೇಯ ವಿವಾಹ ಡಾ.ಗುರುಪ್ರೀತ್ ಕೌರ್ ಅವರೊಂದಿಗೆ ಸಿಖ್ ಸಂಪ್ರದಾಯದಂತೆ ಗುರುದ್ವಾರದಲ್ಲಿ ನಡೆಯಿತು.

ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಅನೇಕ ರಾಜಕೀಯ ನಾಯಕರು ಮದುವೆಯಲ್ಲಿ ಪಾಲ್ಗೊಂಡು ದಂಪತಿಗಳಿಗೆ ಆಶೀರ್ವದಿಸಿದರು.

ಈ ಕುರಿತು ಟ್ವೀಟ್ ಮಾಡಿರುವ ಎಎಪಿ ಸಂಸದ ರಾಘವ್ ಚಡ್ಡಾ, ನಾನು ನನ್ನ ತಾಯಿಯೊಂದಿಗೆ ಇಲ್ಲಿಗೆ ಬಂದಿದ್ದೇನೆ. ಈ ವಿಶೇಷ ಸಂದರ್ಭದಲ್ಲಿ ನಾನು ಮನ್ ಸಾಹೇಬ್ ಮತ್ತು ಅವರ ಕುಟುಂಬವನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ ಎಂದಿದ್ದಾರೆ.

ಇದು ಮಾನ್ ಅವರ ಎರಡನೇ ವಿವಾಹವಾಗಿದ್ದು ಅವರು 2015 ರಲ್ಲಿ ತಮ್ಮ ಮೊದಲ ಪತ್ನಿಯಿಂದ ವಿಚ್ಚೇಧನ ಪಡೆದಿದ್ದು, ಅವರಿಗೆ ಇಬ್ಬರು ಮಕ್ಕಳಿದ್ದಾರೆ.

No Comments

Leave A Comment