Log In
BREAKING NEWS >
ನವೆ೦ಬರ್ 22ರಿ೦ದ ನವೆ೦ಬರ್ 27ರವರೆಗೆ ಉಡುಪಿಯ ಮಹತೋಭಾರ ಶ್ರೀಚ೦ದ್ರಮೌಳೀಶ್ವರ ದೇವರ ಕಾಲಾವಧಿ ರಥೋತ್ಸವ ಜರಗಲಿದೆ....,,,ನವೆ೦ಬರ್ 28ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 94 ನೇ ಭಜನಾ ಸಪ್ತಾಹಮಹೋತ್ಸವ ಆರ೦ಭ....

ಸುಳ್ಯ: ಭೂಕಂಪನದಿಂದ ಹಾನಿಗೀಡಾದ ಮನೆಗೆ ಸಚಿವರ ಭೇಟಿ

ಸುಳ್ಯ:ಜು 07. ಕೆಲದಿನಗಳ ಹಿಂದೆ ಭೂಕಂಪನದಿಂದ ಹಾನಿಗೊಳಪಟ್ಟ ಸುಳ್ಯ ತಾಲೂಕಿನ ವಸಂತ ಭಟ್ ಅವರ ಮನೆಗೆ ವಿವಿಧ ಇಲಾಖೆಗಳ ಸಚಿವರು ಗುರುವಾರ ಭೇಟಿ ನೀಡಿ 45 ಸಾವಿರ ರೂ.ಗಳ ಚೆಕ್ ವಿತರಿಸಿದರು. 5 ಲಕ್ಷ ರೂ.ಗಳ ಪರಿಹಾರ ಒದಗಿಸುವ ಭರವಸೆಯನ್ನು ಇದೇ ವೇಳೆ ನೀಡಿದರು.

ಕಂದಾಯ ಸಚಿವ ಆರ್. ಅಶೋಕ್, ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್, ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕುಮಾರ್, ಸುಳ್ಯ ತಾಲೂಕು ತಹಶೀಲ್ದಾರ್ ಅನಿತಾ ಲಕ್ಷ್ಮೀ ಅವರು ಭೇಟಿ ನೀಡಿ ಚೆಕ್ ಹಸ್ತಾಂತರ ಮಾಡಿದರು.

No Comments

Leave A Comment