ಸುರತ್ಕಲ್:ಜು 08. ಸರಕು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಓಮ್ನಿ ಚಾಲಕ ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಮಧ್ಯಾಹ್ನ ಸುರತ್ಕಲ್ ನ ಹೊನ್ನಕಟ್ಟೆ ಜಂಕ್ಷನ್ ನಲ್ಲಿ ನಡೆದಿದೆ.
ಓಮಿನಿ ಚಾಲಕ ಗೋಕುಲ ನಗರ ನಿವಾಸಿ ಲೋಕೇಶ್ ಕುಲಾಲ್ (38) ರವರು ಮೃತ ಪಟ್ಟಿದ್ದಾರೆ.
ಅಪಘಾತದ ಪರಿಣಾಮ ಓಮಿನಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಲಾರಿ ಚಾಲಕನ ಅಜಾಗರೂಕತೆಯೇ ಅವಘಡಕ್ಕೆ ಸಂಭವಿಸಿದೆ ಎನ್ನಲಾಗಿದ್ದು, ಸುರತ್ಕಲ್ ಉತ್ತರ ಟ್ರಾಫಿಕ್ ಪೊಲೀಸರು ಆಗಮಿಸಿ ಕ್ರೈನ್ ಸಹಾಯದಿಂದ ಲಾರಿಯನ್ನು ಎತ್ತಿ ಓಮಿನಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ನೇರವಾಗಿದ್ದಾರೆ.
ಸುಮಾರು ಅರ್ಧ ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಲಾಗಿತ್ತು. ಸ್ಕೂಟರ್ ಸವಾರರೊಬ್ಬರು ಅವಘಡದಲ್ಲಿ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ