ಕಲಬುರಗಿ : ನಗರಸಭೆಯ ಮಾಜಿ ಅಧ್ಯಕ್ಷರೊಬ್ಬರ ಬರ್ಬರ ಹತ್ಯೆ ಕಲಬುರಗಿ: ನಗರದಲ್ಲಿ ಹಾಡ ಹಗಲೇ ನಗರಸಭೆ ಮಾಜಿ ಅಧ್ಯಕ್ಷರೊಬ್ಬರನ್ನು ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಇರಿದು ಹತ್ಯೆ ನಡೆಸಿರುವ ಘಟನೆ ಸಂಭವಿಸಿದೆ. ಕಲಬುರಗಿ ಜಿಲ್ಲೆಯ ಶಹಬಾದ್ ನಗರ ಸಭೆ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಹಾಲಿ ನಗರ ಸಭೆಯ ಅಧ್ಯಕ್ಷೆಯ ಪತಿ ಗಿರೀಶ್ ಕಂಬಾನು ಕೊಲೆಯಾದವರು ಎಂದು ತಿಳಿಯಲಾಗಿದೆ. ಚಿತ್ತಾಪುರ ತಾಲೂಕಿನ ಶಹಬಾದ್ ಪಟ್ಟಣದಲ್ಲಿ ರೈಲ್ವೆ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಶಹಾಬಾದ್ ರೈಲ್ವೆ ನಿಲ್ದಾಣದ ಬಳಿ ಕುಳಿತಿದ್ದ ಗಿರೀಶ್ ಅವರನ್ನು ಹುಡುಕಿಕೊಂಡು ಬಂದ ದುಷ್ಕರ್ಮಿಗಳು ತಲ್ವಾರ್‌ನಿಂದ ಹತ್ತಾರು ಕಡೆ ಇರಿದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಗಂಭೀರ ಗಾಯಗೊಂಡಿದ್ದ ಗಿರೀಶ್ ಕಂಬಾನೂರನನ್ನ ತಕ್ಷಣ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತು. ಆದರೆ, ಅದಾಗಲೇ ಕೊನೆಯುಸಿರೆಳೆದಿದ್ದರು ಎಂದು ತಿಳಿದು ಬಂದಿದೆ. ಈ ಸಂಬಂಧ ಶಹಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಕೊಲೆ ಪ್ರಕರಣವನ್ನು ತನಿಖೆ ನಡೆಸುತ್ತಿದ್ದಾರೆ. Share this:TweetWhatsAppEmailPrintTelegram