Log In
BREAKING NEWS >
ಉಡುಪಿ: ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ಕಾಂಕ್ರೀಟಿಕರಣ ಹಿನ್ನಲೆ : 45 ದಿನ ಘನ ವಾಹನ ಸಂಚಾರಕ್ಕೆ ನಿಷೇಧ- ಡಿಸಿ ಆದೇಶ...

ಶ್ರೀಕೃಷ್ಣಮಠಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ- ಶ್ರೀಗಳಿಗೆ ಗುರುವ೦ದನೆ…

ಉಡುಪಿ: ಶ್ರೀಕೃಷ್ಣಮಠಕ್ಕೆ ಕರ್ನಾಟಕ ರಾಜ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಭೇಟಿ ನೀಡಿದ ಸಂದರ್ಭದಲ್ಲಿ, ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು.

ಮುಖ್ಯಮಂತ್ರಿಗಳು ದೇವರ ದರ್ಶನ ಪಡೆದು, ಗುರುಪೂರ್ಣಿಮೆ ಪ್ರಯುಕ್ತ, ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಗೆ ಕಾಷಾಯ ವಸನವಿತ್ತು ಗುರುವಂದನೆ ಸಲ್ಲಿಸಿದರು.

ಪರ್ಯಾಯ ಶ್ರೀಪಾದರು ಅವರನ್ನು ಸ್ಮರಣಿಕೆ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಸಚಿವರುಗಳಾದ ಆರ್.ಅಶೋಕ್, ಅಂಗಾರ,ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕರಾದ ಕೆ.ರಘುಪತಿ ಭಟ್, ಬೈಂದೂರು ಶಾಸಕರಾದ ಸುಕುಮಾರ್ ಶೆಟ್ಟಿ , ಕರಾವಳಿ ಪ್ರಾಧಿಕಾರದ ಮಟ್ಟಾರ್ ರತ್ನಾಕರ ಹೆಗ್ಡೆ,ಬಿ.ಜೆ.ಪಿ.ಜಿಲ್ಲಾಧ್ಯಕ್ಷ ಸುರೇಶ ನಾಯಕ್, ಬಿ.ಜೆ.ಪಿ ಯ ಉದಯಕುಮಾರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದು ಶ್ರೀಪಾದರಿಗೆ ಗುರುವಂದನೆ ಸಲ್ಲಿಸಿದರು.

ಪರ್ಯಾಯ ಮಠದ ಪಾರುಪತ್ಯಗಾರರಾದ ಶ್ರೀನಿವಾಸ ಉಪಾಧ್ಯಾಯ ಹಾಗೂ ಪರ್ಯಾಯ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್, ವಾಸುದೇವ ಮೊದಲಾದವರು ಉಪಸ್ಥಿತರಿದ್ದರು.

No Comments

Leave A Comment