ಶಿವಮೊಗ್ಗ: ಲವ-ಕುಶನನ್ನು ಹತ್ಯೆ ಮಾಡಿದ ಭೂಗತ ಪಾತಕಿ ಕುಖ್ಯಾತ ರೌಡಿಶೀಟರ್ ಹಂದಿ ಅಣ್ಣಿ ಬರ್ಬರ ಹತ್ಯೆ
ಶಿವಮೊಗ್ಗ: ಲವ ಹಾಗೂ ಕುಶನನ್ನು ಹತ್ಯೆ ಮಾಡಿ ಭೂಗತ ಲೋಕಕ್ಕೆ ಕಾಲಿಟ್ಟಿದ್ದ ಹಂದಿ ಅಣ್ಣಿಯನ್ನು ಹಾಡಹಗಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದು ಶಿವಮೊಗ್ಗ ಜನತೆ ಬೆಚ್ಚಿಬಿದ್ದಿದ್ದಾರೆ.
ಇಂದು ಬೆಳ್ಳಂಬೆಳಗ್ಗೆ ಇನ್ನೋವಾ ಕಾರಿನಲ್ಲಿ ಬಂದ ಆರೇಳು ಜನರ ತಂಡ ವಿನೋಬನಗರ ಚೌಕಿ ಬಳಿ ರೌಡಿಶೀಟರ್ ಹಂದಿ ಅಣ್ಣಿಯನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿದ್ದಾರೆ.
ತಲೆ ಭಾಗಕ್ಕೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ ಪರಿಣಾಮ ಹಂದಿ ಅಣ್ಣಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಗಳ ಪತ್ತೆಗೆ ಜಾಲ ಬೀಸಿದ್ದಾರೆ.