Log In
BREAKING NEWS >
```````ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆಮತ್ತು ಅಭಿಮಾನಿಗಳಿಗೆ ಶ್ರೀಗೌರಿ-ಗಣೇಶ ಹಬ್ಬದ ಶುಭಾಶಯಗಳು````````

ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ ರಾಬಿನ್ ಉತ್ತಪ್ಪ ಪತ್ನಿ ಶೀತಲ್

ನವದೆಹಲಿ:ಜು 15.ಟೀಂ ಇಂಡಿಯಾ ಆಟಗಾರ ರಾಬಿನ್ ಉತ್ತಪ್ಪ ಅವರ ಪತ್ನಿ ಶೀತಲ್ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ವಿಚಾರವನ್ನು ರಾಬಿನ್ ಉತ್ತಪ್ಪ ತಮ್ಮ ಇನ್‌‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಟೀಂ ಇಂಡಿಯಾ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಬ್ಯಾಟರ್ ರಾಬಿನ್ ಉತ್ತಪ್ಪ ಅವರು ಮಗುವಿನ ಫೋಟೋವನ್ನೂ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಮಗುವಿಗೆ ಟ್ರಿನಿಟಿ ಥಿಯಾ ಎಂದು ನಾಮಕರಣ ಮಾಡಿರುವುದಾಗಿಯೂ ಹೇಳಿಕೊಂಡಿದ್ದಾರೆ. ಪತ್ನಿ ಶೀತಲ್, ಮಗ ಹಾಗೂ ಪುಟ್ಟ ಮಗುವನ್ನು ಕೈಯಲ್ಲಿ ಎತ್ತಿಕೊಂಡಿರುವ ಫ್ಯಾಮಿಲಿ ಫೋಟೋವನ್ನು ಹಂಚಿಕೊಂಡಿರುವ ರಾಬಿನ್ ಉತ್ತಪ್ಪ, ನಮ್ಮ ಮನೆಗೆ ಹೊಸ ಅತಿಥಿಯ ಆಗಮನವಾಗಿರುವುದನ್ನು ಹೇಳಿಕೊಳ್ಳಲು ಸಂತಸವಾಗುತ್ತಿದೆ. ನೀನು ಜಗತ್ತಿಗೆ ಬರಲು ನಮ್ಮನ್ನು ಆಯ್ಕೆ ಮಾಡಿಕೊಂಡಿರುವುದಕ್ಕೆ ನಾವು ಕೃತಜ್ಞರಾಗಿದ್ದೇವೆ ಎಂದು ಮಗುವನ್ನು ಉಲ್ಲೇಖಿಸಿ ಬರೆದುಕೊಂಡಿದ್ದಾರೆ.

ಕ್ರಿಕೆಟ್ ತಾರೆಗಳಾದ ಕೆ.ಎಲ್. ರಾಹುಲ್, ಇರ್ಫಾನ್ ಪಠಾಣ್, ಪಯೂಷ್ ಚಾವ್ಲಾ ಸೇರಿದಂತೆ ಹಲವರು ಅಭಿನಂದನೆ ಸಲ್ಲಿಸಿದ್ದಾರೆ. ರಾಬಿನ್ ಮನೆಯ ನೂತನ ಸದಸ್ಯೆಗೆ ಅಭಿಮಾನಿಗಳೂ ಹೃದಯ ತುಂಬಿ ಹಾರೈಸಿದ್ದಾರೆ. ರಾಬಿನ್ ಉತ್ತಪ್ಪ ಮತ್ತು ಶೀತಲ್ ಗೌತಮ್ 2016ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

No Comments

Leave A Comment