Log In
BREAKING NEWS >
```````ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆಮತ್ತು ಅಭಿಮಾನಿಗಳಿಗೆ ಶ್ರೀಗೌರಿ-ಗಣೇಶ ಹಬ್ಬದ ಶುಭಾಶಯಗಳು````````

ಸೇತುವೆಯಿಂದ ನದಿಗೆ ಬಿದ್ದ ಕಾರು – ಪವಾಡ ಸದೃಶ ರೀತಿಯಲ್ಲಿ ಸ್ಥಳೀಯರಿಂದ ಚಾಲಕನ ರಕ್ಷಣೆ

ಬೆಳಗಾವಿ:ಜು 16. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಬಳಿಯ ದಾನವಾಡ-ದತ್ತವಾಡ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ದೂದಗಂಗಾ ನದಿಗೆ ಬಿದ್ದಿದ್ದು, ಚಾಲಕ ಪವಾಡ ಸದೃಶ ರೀತಿಯಲ್ಲಿ ಪಾರಾಗಿರುವ ಘಟನೆ ನಡೆದಿದೆ.

ಮಹಾರಾಷ್ಟ್ರದ ಪುಣೆಯಿಂದ ಚಿಕ್ಕೋಡಿ ತಾಲೂಕಿನ ಯಕ್ಸಾಂಬ ಪಟ್ಟಣಕ್ಕೆ ಪ್ರಯಾಣಿಕರನ್ನು ಕರೆತಂದ ಕಾರು ಚಾಲಕ ವಾಪಸ್ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಇನ್ನು ಚಾಲಕನ ನಿಯಂತ್ರಣ ತಪ್ಪಿದ ಕಾರು ಸೇತುವೆಯಿಂದ ಕೆಳಗೆ ಬಿದ್ದಿದ್ದು, ತಕ್ಷಣ ಸ್ಥಳೀಯರು,ಹಗ್ಗದ ಸಹಾಯದಿಂದ ಚಾಲಕನನ್ನು ರಕ್ಷಿಸಿದ್ದು, ಬಳಿಕ ಟ್ರ್ಯಾಕ್ಟರ್ ಮೂಲಕ ಕಾರನ್ನು ನದಿಯಿಂದ ಹೊರತೆಗೆದಿದ್ದಾರೆ ಎಂದು ತಿಳಿದು ಬಂದಿದೆ.

No Comments

Leave A Comment