ಬೆಂಗಳೂರು: ಜಿಎಸ್‍ಟಿ ಏರಿಕೆಯಿಂದಾಗಿ ಕೆಎಂಎಫ್ ಉತ್ಪನ್ನಗಳಾದ ಮೊಸರು, ಮಜ್ಜಿಗೆ, ಲಸ್ಸಿಗಳ ಬೆಲೆ ಏರಿಕೆಯಾಗಿದೆ. ಕೇಂದ್ರದ ನೂತನ ಜಿಎಸ್‍ಟಿ ನೀತಿ ಜಾರಿ ಹಿನ್ನೆಲೆಯಲ್ಲಿ ಬೆಲೆ ಏರಿಕೆ ಮಾಡಲಾಗಿದ್ದು, ಹೊಸ ದರಗಳು ಇಂದಿನಿಂದಲೇ ಜಾರಿಗೆ ಬರಲಿವೆ.
‘ನಾವು ಬೆಲೆಯನ್ನು ಹೆಚ್ಚಿಸಲು ನಿರ್ಧರಿಸಿದ್ದು, ಇದಕ್ಕಾಗಿ ಶೀಘ್ರದಲ್ಲೇ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಪರಿಷ್ಕøತ ದರಕ್ಕೆ ಅನುಮೋದನೆ ಪಡೆಯುತ್ತೇವೆ’ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾಧ್ಯಮಗಳಲ್ಲಿ ಪ್ರತಿಕ್ರಿಯಿಸಿದ್ದಾರೆ. ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 5ರೂ. ಏರಿಕೆ ಮಾಡುವಂತೆ ಹಾಲು ಒಕ್ಕೂಟಗಳು ರಾಜ್ಯ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದೆ. ಅಲ್ಲದೇ ಕೆಎಂಎಫ್ ಹಾಲಿನ ದರ ಏರಿಕೆಗೆ ಕೆಎಂಎಫ್ ಅಸ್ತು ಎಂದಿದೆ. ಹಾಲಿನ ದರ ಏರಿಕೆ ಪ್ರಸ್ತಾವನೆಗೆ ಸರ್ಕಾರ ಒಪ್ಪಿಗೆ ನೀಡಿದರೆ ಜನರ ಗಾಯದ ಮೇಲೆ ಸರ್ಕಾರ ಬರೆ ಎಳೆದಂತಾಗುವುದು.