Log In
BREAKING NEWS >
```````ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆಮತ್ತು ಅಭಿಮಾನಿಗಳಿಗೆ ಶ್ರೀಗೌರಿ-ಗಣೇಶ ಹಬ್ಬದ ಶುಭಾಶಯಗಳು````````

ಅಮೃತ ಮಹೋತ್ಸವ: ಶಾಲೆಗಳಲ್ಲಿ 3 ದಿನ ರಾಷ್ಟ್ರಧ್ವಜ ಹಾರಾಟ

ಬೆಂಗಳೂರು:ಜು 19. ಭಾರತ ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 75 ವರ್ಷ ಪೂರೈಸುತ್ತಿದೆ. ಹೀಗಾಗಿ ದೇಶಾದ್ಯಂತ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಆಚರಿಸಲು ಕರೆ ನೀಡಲಾಗಿದೆ. ಇದೇ ಸಂದರ್ಭದಲ್ಲಿ ಕರ್ನಾಟಕದಲ್ಲೂ ಆಚರಣೆ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ.

ಈ ಹಿನ್ನಲೆಯಲ್ಲಿಯೇ ರಾಜ್ಯದ ಎಲ್ಲಾ ಶಾಲೆಗಳ ಮೇಲೆ 3 ದಿನ ರಾಷ್ಟ್ರಧ್ವಜ ಹಾರಾಟ ಕಡ್ಡಾಯಗೊಳಿಸಿ ಸರ್ಕಾರದ ಆದೇಶ ಹೊರಡಿಸಿದೆ.

75ನೇ ವರ್ಷದ ಸ್ವಾತಂತ್ರ್ಯೊತ್ಸವ ಹಿನ್ನೆಲೆಯಲ್ಲಿ ದೇಶಾದ್ಯಂತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲೆಗಳ ಮೇಲೆ ರಾಷ್ಟ್ರಧ್ವಜ ಹಾರಾಟ ಕಡ್ಡಾಯ. ಆಗಸ್ಟ್ 11ರಿಂದ 17ರವರೆಗೆ ರಾಷ್ಟ್ರಧ್ವಜ ಹಾರಿಸಬೇಕು ಎಂದು ಶಿಕ್ಷಣ ಇಲಾಖೆ ಹಾಗೂ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

No Comments

Leave A Comment