Log In
BREAKING NEWS >
ಮಾರ್ಚ್ 22ರ೦ದು ಚ೦ದ್ರಾಮಾನ ಯುಗಾದಿ ,ಏಪ್ರಿಲ್ 15ರ೦ದು ಸೌರಮಾನ ಯುಗಾದಿ ಹಬ್ಬವು ನಡೆಯಲಿದೆ.ಹಲವಾರು ಗಣ್ಯರು ಯುಗಾದಿ ಹಬ್ಬದ ಶುಭಾಶಯವನ್ನು ಕೋರಿರುತ್ತಾರೆ.....ಮಾ.21,22 ಕಾಪು ಸುಗ್ಗಿ ಮಾರಿಪೂಜೆ ದಿನ ನಿಗದಿ....

ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಾ.ವೀರೇಂದ್ರ ಹೆಗ್ಗಡೆ

ನವದೆಹಲಿ:ಜು 21. ಐತಿಹಾಸಿಕ ಗೌರವಗಳಿಗೆ ಸಾಕ್ಷಿಯಾಗಿರುವ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿಯಾಗಿರುವ ಡಾ| ಡಿ. ವೀರೇಂದ್ರ ಹೆಗ್ಗಡೆ ರಾಜ್ಯಸಭಾ ಸದಸ್ಯರಾಗಿ ಗುರುವಾರ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿದ್ದಾರೆ.

73 ವರ್ಷ ವಯಸ್ಸಿನ ಹೆಗ್ಗಡೆ ಅವರು ಪ್ರಸಿದ್ಧ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದ ಆನುವಂಶಿಕ ಧರ್ಮದರ್ಶಿಯಾಗಿದ್ದಾರೆ.

ಜನಪ್ರಿಯ ಸಂಗೀತ ಸಂಯೋಜಕ ಇಳಯರಾಜಾ ಮತ್ತು ಮಾಜಿ ಒಲಿಂಪಿಕ್ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ಪಿ.ಟಿ.ಉಷಾ, ಧರ್ಮಸ್ಧಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಡೆ ಸೇರಿದಂತೆ ನಾಲ್ವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿತ್ತು.

ಪ್ರಮಾಣವಚನ ಸ್ವೀಕರಿಸಲು ಡಾ. ಹೆಗ್ಗಡೆ ಅವರು ಬುಧವಾರವೇ ದೆಹಲಿಗೆ ಪ್ರಯಾಣ ಬೆಳೆಸಿದ್ದರು.

No Comments

Leave A Comment