Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ತುಳು ಸಾಹಿತ್ಯ ಅಕಾಡೆಮಿಯ 2021 ನೇ ಸಾಲಿನ ಪ್ರಶಸ್ತಿ ಪ್ರಕಟ

ಮಂಗಳೂರು:ಜು 22. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ 2021 ನೇ ಸಾಲಿನ ಗೌರವ ಪ್ರಶಸ್ತಿ ಘೋಷಣೆಯಾಗಿದ್ದು, ಪ್ರಶಸ್ತಗೆ ಆಯ್ಕೆಯಾದವರ ಹೆಸರನ್ನು ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಪ್ರಕಟಿಸಿದ್ದಾರೆ.

ಈ ಕುರಿತಾಗಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ದಯಾನಂದ ಕತ್ತಲ್ ಸಾರ್, ತುಳು ಜಾನಪದ ಕ್ಷೇತ್ರದಲ್ಲಿ ಸಂಜೀವ ಬಂಗೇರ ತಲಪಾಡಿ, ತುಳು ನಾಟಕ, ಸಿನಿಮಾ ವಿಭಾಗದಲ್ಲಿ ಕೃಷ್ಣಪ್ಪ ಉಪ್ಪೂರು, ತುಳು ಸಾಹಿತ್ಯ ವಿಭಾಗದಲ್ಲಿ ಉಲ್ಲಾಸ ಕೃಷ್ಣ ಪೈ ಪುತ್ತೂರು ಆಯ್ಕೆಯಾಗಿದ್ದಾರೆ.

ಇನ್ನು ಪುಸ್ತಕ ಬಹುಮಾನ ಯೋಜನೆಯಲ್ಲಿ, ಕವನ ಸಂಕಲನದಲ್ಲಿ ಯೋಗೀಶ್ ಕಾಂಚನ್ ಬೈಕಂಪಾಡಿ, ನಾಟಕ ವಿಭಾಗದಲ್ಲಿ ಅಕ್ಷತರಾಜ್ ಪೆರ್ಲ, ಅಧ್ಯಯನ ವಿಭಾಗದಲ್ಲಿ ಡಾ ಅಶೋಕ್ ಆಳ್ವ ಸುರತ್ಕಲ್ ಅವರನ್ನು ಆಯ್ಕೆ ಮಾಡಲಾಗಿದೆ.

ವಿಶೇಷ ಪುರಸ್ಕಾರದಲ್ಲಿ ಬಾಲಪ್ರತಿಭಾ ಪುರಸ್ಕಾರ ವಿಭಾಗದಲ್ಲಿ ಕು. ನಿರೀಕ್ಷಾ ಕೋಟ್ಯಾನ್ ಕೋಡಿಕೆರೆ, ಕು. ಜೀವಿಕಾ ಶೆಟ್ಟಿ ಮುಂಬೈ, ಕು. ಸಾನ್ವಿ ಯು ಎಸ್ ಎ, ಯುವ ಸಾಧಕ ಪುರಸ್ಕಾರ ಹರಿಪ್ರಸಾದ್ ನಂದಳಿಕೆ, ಚಿನ್ಮಯಿ ಮೋಹನ್ ಸಾಲಿಯಾನ್ ಮುಂಬೈ, ರಮಾನಂದ ಶೆಟ್ಟಿ , ಮಾಧ್ಯಮ ಪುರಸ್ಕಾರ ವಿಭಾಗದಲ್ಲಿ ಶಶಿ ಬಂಡಿಮಾರ್, ರೋನ್ಸ್ ಬಂಟ್ವಾಳ, ಸಂಘಟನಾ ಪುರಸ್ಕಾರ ವಿಭಾಗದಲ್ಲಿ ಜೈ ತುಳುನಾಡು (ರಿ), ತುಳು ಕೂಟ ಫೌಂಡೇಶನ್ ನಾಲಸೋಪಾರ, ಮುಂಬೈ, ತುಳು ಕೂಟ ಕತಾರ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಗೌರವ ಪ್ರಶಸ್ತಿ 50 ಸಾವಿರ ರೂ., ಪ್ರಶಸ್ತಿ ಪತ್ರ, ಸ್ಮರಣಿಕೆ, ಪುಸ್ತಕ ಬಹುಮಾನ 25 ಸಾವಿರ ರೂ. ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ಒಳಗೊಂಡಿದ್ದು, ವಿಶೇಷ ಪುರಸ್ಕಾರ 10 ಸಾವಿರ ರೂ. ಪ್ರಶಸ್ತಿ ಹಾಗೂ ಸ್ಮರಣಿಕೆ ಒಳಗೊಂಡಿರುತ್ತದೆ ಎಂದು ತಿಳಿಸಿದ್ದಾರೆ.

No Comments

Leave A Comment