Log In
BREAKING NEWS >
ಉಡುಪಿ ನಗರದಲ್ಲಿ ರಿಕ್ಷಾ ಮೀಟರ್ ಕನಿಷ್ಠದರ ರೂ.40/-ಫಿಕ್ಸ್:ಕಿ.ಮೀಟರ್ ಗೆ ರೂ.20/-ಜಾರಿಗೆ ಕ್ಷಣಗಣನೆ…

ಬೈಂದೂರು : ಲಾಡ್ಜ್ ನಲ್ಲಿ ಅನ್ಯ ಧರ್ಮದ ಯುವಕನೊಂದಿಗೆ ಯುವತಿ ಪತ್ತೆ : ಪೊಲೀಸರಿಂದ ವಿಚಾರಣೆ

ಬೈಂದೂರು : ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಂದನವನ ವಸತಿ ಗೃಹಕ್ಕೆ ಭಿನ್ನಮತೀಯ ಜೋಡಿಗಳು ಬಂದ ವಿಷಯ ತಿಳಿದು ಹಿಂದೂ ಸಂಘಟನೆಯ ಕಾರ್ಯಕರ್ತರು ನೀಡಿದ ಮಾಹಿತಿಯ ಮೇರೆಗೆ ಬೈಂದೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಇಬ್ಬರನ್ನೂ ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದ ಘಟನೆ ಇಂದು ನಡೆದಿದೆ.

ಉಪ್ಪುಂದ ಲಾಡ್ಜ್ ಒಂದಕ್ಕ ಅಮೀರ್ ಅಲಿ(45) ಉಳ್ಳಾಲ ಬೈಲು, ಉಳ್ಳಾಲ, ದ.ಕ ಜಿಲ್ಲೆ ಹಾಗೂ ಶ್ರಾವಣ್ಯ(28) ಉಳ್ಳಾಲ ಎಂಬವರೊಂದಿಗೆ ಆಗಮಿಸಿದ್ದರು ಎಂದು ಮಾಹಿತಿ ತಿಳಿದು ಬಂದಿದೆ.

ಅಮೀರ್ ಅಲಿ ಗುಜರಿ ವ್ಯಾಪಾರಿಯಾಗಿದ್ದು, ದ.ಕ ಜಿಲ್ಲೆಯ ತೊಕ್ಕುಟ್ಟುವಿನಲ್ಲಿ ಗುಜರಿ ಅಂಗಡಿ  ಇಟ್ಟುಕೊಂಡಿರುತ್ತಾನೆ. ಶ್ರಾವಣ್ಯ ಅವನ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಆಕೆಯ ಒಪ್ಪಿಗೆಯಿಂದಲೇ ಲಾಡ್ಜ್ ಗೆ ಕರೆತಂದಿರುವುದಾಗಿ ತಿಳಿದುಬಂದಿರುತ್ತದೆ.

ಶ್ರಾವಣ್ಯನ ಮನೆಯವರಿಗೆ ವಿಷಯ ತಿಳಿಸಿದ್ದು ಬೈಂದೂರು ಠಾಣೆಗೆ ಬರುತ್ತಿರುವುದಾಗಿ ತಿಳಿದುಬಂದಿರುತ್ತದೆ‌.ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

No Comments

Leave A Comment