Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರಿಗೆ ಷಷ್ಟ್ಯಬ್ದ ಪ್ರಯುಕ್ತ ಶ್ರೀಗಳಿಗೆ ತುಲಾಭಾರ…

ಮ೦ಗಳೂರು:ಶ್ರೀ ಪುತ್ತಿಗೆ ಮಠದ ಶಾಖೆ, ನವ ವೃಂದಾವನ ಸೇವಾ ಪ್ರತಿಷ್ಠಾನ ರಿ. ಶ್ರೀ ರಾಘವೇಂದ್ರ ಸ್ವಾಮಿ ಮಠ ಕುಳಾಯಿ ಹೊಸಬೆಟ್ಟು ಇದರ ಸಂಸ್ಥಾಪನಾ ರಜತ ಮಹೋತ್ಸವದ ಸಂದರ್ಭದಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮದ ಸಮಾರಂಭವನ್ನು ಪುತ್ತಿಗೆ ಮಠದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಉದ್ಘಾಟಿಸಿ ಆಶೀರ್ವಚನ ನೀಡಿದರು.

ಮುಖ್ಯ ಅತಿಥಿಗಳಾಗಿ ಶ್ರೀ ಕಟೀಲು ಕ್ಷೇತ್ರದ ಪ್ರಧಾನ ಅರ್ಚಕರಾದ ಲಕ್ಷ್ಮೀನಾರಾಯಣ ಅಸ್ರಣ್ಣ ,ಸಮಾರಂಭದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ . ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಭರತ್ ಶೆಟ್ಟಿ ಗಣ್ಯರಾದ ಧರ್ಮದರ್ಶಿ ಹರಿಕೃಷ್ಣ ಪುನರೂರು, ಶ್ರೀಶರವು ಮಹಾಗಣಪತಿ ದೇವಸ್ಥಾನದ ಮೊಕ್ತೇಸರರಾದ ರಾಘವೇಂದ್ರ ಶಾಸ್ತ್ರಿ, ಜ್ಯೋತಿಷಿ ನಾಗೇಂದ್ರ ಭಾರದ್ವಾಜ್, ವರುಣ್ ಚೌಟ , ಶ್ರೀ ಮಠದ ರಾಘವೇಂದ್ರ ಎಚ್ ವಿ, ಎಸ್ ಪ್ರದೀಪ್ ಕಲ್ಕೂರ್ . ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರಜತಮಹೋತ್ಸವ ಸಮಿತಿಯ ವತಿಯಿಂದ ಪರಮಪೂಜ್ಯ ಶ್ರೀಪಾದರ ಷಷ್ಟ್ಯಬ್ದ ಪ್ರಯುಕ್ತ ಶ್ರೀಗಳಿಗೆ ಗಣ್ಯರ ಸಮ್ಮುಖದಲ್ಲಿ ತುಲಾಭಾರ ನೆರವೇರಿತು.

No Comments

Leave A Comment