Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ವಕೀಲೆ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣ : ಆರೋಪಿ ಪೊಲೀಸರ ಬಲೆಗೆ

ಉಡುಪಿ: ನಗರದ ಕೋರ್ಟ್ ಹಿಂಬದಿ ರಸ್ತೆ ಸಮೀಪದ ವಕೀಲೆ ಮನೆಗೆ ಹಾಡಹಗಲೇ ನುಗ್ಗಿ ಒಟ್ಟು 25 ಲಕ್ಷ ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಉಡುಪಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

 ಬಾಗಲಕೋಟೆ ಜಿಲ್ಲೆಯ ಮುತ್ತಣ್ಣ ಬಸಣ್ಣ ಮಾವರಾಣಿ ಬಂಧಿತ ಆರೋಪಿಯಾಗಿದ್ದಾನೆ.

 ಆರೋಪಿ ಹಾಡಹಗಲೇ ವಕೀಲೆ ಮನೆಗೆ ನುಗ್ಗಿ ನಗದು, ಚಿನ್ನಾಭರಣ, ಬೆಲೆಬಾಳುವ ಸೀರೆ ಸೇರಿದಂತೆ ಒಟ್ಟು 25 ಲಕ್ಷ ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದ. ಪೊಲೀಸರು ಆರೋಪಿಯಿಂದ ಸುಮಾರು ಹತ್ತು ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 38,500 ರೂ. ನಗದು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿ ಮುತ್ತಣ್ಣನ ಮಾಜಿ ಪ್ರಿಯತಮೆಯೇ ಈ ಕಳ್ಳತನ ಪ್ರಕರಣದ ಸೂತ್ರಧಾರಿ ಎನ್ನಲಾಗಿದೆ. ಕೆಲವು ವರ್ಷಗಳ ಹಿಂದೆ ವಕೀಲೆಯ ಮನೆಯಲ್ಲಿ ಕೆಲಸಕ್ಕಿದ್ದ ಯುವತಿ ಹಾಕಿದ್ದ ಪ್ಲಾನ್ ಪ್ರಕಾರವೇ ಮುತ್ತಣ್ಣ ಕಳ್ಳತನ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಉಡುಪಿಗೆ ಲಾರಿಯಲ್ಲಿ ಸರಕು ಸಾಗಿಸಲು ಬಂದಾತ ಮೊದಲೇ ಪ್ಲಾನ್ ಮಾಡಿದ್ದ ರೀತಿಯಲ್ಲಿ ಕಳವುಗೈದು ಪರಾರಿಯಾಗಿದ್ದ. ಉಡುಪಿ ನಗರ ಪೊಲೀಸ್ ಇನ್ಸ್ ಪೆಕ್ಟರ್ ಪ್ರಮೋದ್ ಪಿ ಮತ್ತು ತಂಡ ಆರೋಪಿಗಾಗಿ ಬಲೆ ಬೀಸಿದ್ದು, ನಗರದ ಎಲ್ಲಾ ಸಿಸಿ ಟಿವಿಗಳನ್ನು ಪರಿಶೀಲಿಸಿದಾಗ ಆರೋಪಿಯ ಸುಳಿವು ಸಿಕ್ಕಿದೆ. ಬಳಿಕ ಪೊಲೀಸರು ಆರೋಪಿಯನ್ನು ಬಾಗಲಕೋಟೆ ಜಿಲ್ಲೆಯ ನೀಲನಗರ ಎಂಬಲ್ಲಿ ಬಂಧಿಸಿದ್ದಾರೆ.

 ಪೊಲೀಸರು ಆರೋಪಿಯನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಆರೋಪಿಗೆ ನ್ಯಾಯಾಲಯವು ಹದಿನೈದು ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

No Comments

Leave A Comment