
ತಾಲೂಕು ಕಚೇರಿ ಸಿಬ್ಬಂದಿ ಆತ್ಮಹತ್ಯೆ
ಕಾರ್ಕಳ: ತಾಲೂಕು ಕಚೇರಿ ಸಿಬ್ಬಂದಿ ಸುಶ್ಮಿತಾ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗ್ರಾಮಕರಣಿಕರಾಗಿದ್ದು, ಕಾರ್ಕಳ ತಾಲೂಕು ಕಚೇರಿಯಲ್ಲಿ ಕೇಸ್ ವರ್ಕರ್ ಆಗಿದ್ದ ಸುಶ್ಮಿತಾ (26ವ) ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ 7 ವರ್ಷಗಳಿಂದ ಅವರು ತಾಲೂಕು ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಕಾರ್ಕಳದ ಹುಡ್ಕೋ ಕಾಲನಿಯಲ್ಲಿನ ಮನೆಯಲ್ಲಿ ವಾಸಿಸುತ್ತಿದ್ದರು.
ತಂದೆ, ತಾಯಿ, ಓರ್ವ ಸಹೋದರಿಯನ್ನು ಅಗಲಿದ್ದಾರೆ. ಕಚೇರಿಯಲ್ಲಿ ಉತ್ತಮ ಸಿಬ್ಬಂದಿ ಎಂಬ ಹೆಸರು ಸಂಪಾದಿಸಿದ್ದರು. ಶಾಲಾ ಕಾಲೇಜಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದರು. ಪ್ರತಿಭೆ ಆಧಾರದಲ್ಲಿ ಸರಕಾರಿ ನೌಕರಿ ಪಡೆದುಕೊಂಡಿದ್ದರು. ಆತ್ಮಹತ್ಯೆಯ ನಿಖರ ಕಾರಣ ತಿಳಿದುಬಂದಿಲ್ಲ.