ಸುಳ್ಯ : ಬಿಜೆಪಿ ಯುವ ನಾಯಕನ ಮೇಲೆ ಹಲ್ಲೆ : ಆಸ್ಪತ್ರೆಯಲ್ಲಿ ಯುವಕ ಸಾವು
ಸುಬ್ರಹ್ಮಣ್ಯ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಸಮೀಪ ಬಿಜೆಪಿ ಯುವ ನಾಯಕ ಹಾಗೂ ಚಿಕನ್ ಅಂಗಡಿ ಮಾಲೀಕನ ಮೇಲೆ ದುಷ್ಕರ್ಮಿಗಳ ತಂಡವೊಂದು ತಲವಾರಿನಿಂದ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಹಲ್ಲೆಗೊಳಾಗದವರು ಪ್ರವೀಣ್ ನೆಟ್ಟಾರ್ ಎಂದು ತಿಳಿಯಲಾಗಿದೆ.ಇವರು ರಾಜಕೀಯ ಕ್ಷೇತ್ರದಲ್ಲಿ ಬೆಳೆಯುತ್ತಿದ್ದರು.ಯಾರೋ ವೈಯಕ್ತಿಕ ದ್ವೇಷದಿಂದ ಹಲ್ಲೆ ನಡೆಸಿದ್ದಾರೆ ಎಂದು ತಿಳಿಯಲಾಗಿದೆ.
ಹಲ್ಲೆಯಲ್ಲಿ ಗಂಭೀರ ಗಾಯಗೊಂಡ ಪ್ರವೀಣ್ ಅವರನ್ನು ಆಸ್ಪತ್ರೆಗೆ ದಾಖಲಿಸುವಾಗ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.