Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಹಂತಕರ ಬಂಧನಕ್ಕೆ ವಿಶೇಷ ಪೊಲೀಸ್ ತಂಡ ರಚನೆ; 7 ಶಂಕಿತರ ಬಂಧನ-ಸಂಸದ ನಳಿನ್ ಕುಮಾರ್ ಮತ್ತು ಬಿಜೆಪಿಗೆ ಧಿಕ್ಕಾರ ಕೂಗಿದ ಕಾರ್ಯಕರ್ತರು

ಮಂಗಳೂರು: ಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಇತ್ತೀಚಿನ ಮಾಹಿತಿಯ ಪ್ರಕಾರ ಐವರು ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ.

ಹತ್ಯೆಯನ್ನು ಖಂಡಿಸಿ ಪುತ್ತೂರು, ಬೆಳ್ಳಾರೆ, ಸುಳ್ಯ, ಕಡಬ ಪಟ್ಟಣಗಳಲ್ಲಿ ಸ್ವಯಂ ಘೋಷಿತ ಬಂದ್ ಗೆ ಹಿಂದು ಪರ ಸಂಘಟನೆಗಳು ಕರೆ ನೀಡಿವೆ. ಮರಣೋತ್ತರ ಪರೀಕ್ಷೆ ಕೈಗೊಂಡಿದ್ದು, ಕುಟುಂಬಸ್ಥರು ನೆಟ್ಟಾರುವಿನಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸಲಾಗಿದೆ. ಜಿಲ್ಲೆಯಾದ್ಯಂತ ಕಟ್ಟೆಚ್ಚರ ಕೈಗೊಳ್ಳಲಾಗಿದೆ.

ಹಂತಕರು ಕೇರಳ ನೋಂದಣಿ ಇರುವ ವಾಹನದಲ್ಲಿ ಬಂದು ಹತ್ಯೆ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಹಂತರ ಪತ್ತೆಗೆ 5 ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಐದು ತಂಡಗಳ ಪೈಕಿ ಮೂರು ತಂಡಗಳನ್ನು ಕ್ರಮವಾಗಿ ಕೇರಳ ಮತ್ತು ಮಡಿಕೇರಿ ಮತ್ತು ಕರ್ನಾಟಕದ ಹಾಸನಕ್ಕೆ ಕಳುಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾಯ್ ಮಾಹಿತಿ ನೀಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದು, ಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು ಅವರ ಮೇಲಿನ ಹತ್ಯೆ ನಿಜಕ್ಕೂ ಖೇದಕರ. ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತಾ, ಈ ದುಷ್ಕೃತ್ಯದಲ್ಲಿ ಯಾರೇ ಭಾಗಿಯಾಗಿದ್ದರು ಮುಲಾಜಿಲ್ಲದೆ ನಮ್ಮ ಸರ್ಕಾರ ಕಠಿಣ ಕ್ರಮವನ್ನು ಕೈಗೊಳ್ಳಲಿದೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಇನ್ನು ಪ್ರವೀಣ್ ಮೃತದೇಹವನ್ನು ಅಂತ್ಯ ಸಂಸ್ಕಾರಕ್ಕಾಗಿ ಹುಟ್ಟೂರಿನತ್ತ ಕೊಂಡೊಯ್ಯಲಾಗುತ್ತಿದೆ.

ಪುತ್ತೂರು: ಹತ್ಯೆಯಾಗಿರುವ ಬಿಜೆಪಿ ಯುವನಾಯಕ ಪ್ರವೀಣ್ ನೆಟ್ಟಾರ್ ಅವರ ಮೃತದೇಹದ ಅಂತಿಮ ದರ್ಶನದ ವೇಳೆ ಬೆಳ್ಳಾರೆ ಜಂಕ್ಷನಿಗೆ ಆಗಮಿಸಿದ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ಧಿಕ್ಕಾರ ಕೂಗಿರುವ ಘಟನೆ ನಡೆದಿದೆ.

ನಳಿನ್ ಕುಮಾರ್ ಕಟೀಲ್, ಸಚಿವ ಸುನೀಲ್‌ ಕುಮಾರ್ ಮತ್ತು ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಬೆಳ್ಳಾರೆಗೆ ಬಂದಿಳಿಯುತ್ತಿದ್ದಂತೆಯೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಬಿಜೆಪಿ ನಾಯಕರ ವಿರುದ್ದ ಹಿಂದೂ ಸಂಘಟನೆಯ ಸಾವಿರಾರು ಕಾರ್ಯಕರ್ತರು ಸಂಸದರು, ಸಚಿವರು ಮತ್ತು ಶಾಸಕರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

No Comments

Leave A Comment