Log In
BREAKING NEWS >
ಜನವರಿ 29ರಿ೦ದ 31ರವರೆಗೆ ಅಮ್ಮು೦ಜೆ ಶ್ರೀದಾಮೋದರ ದೇವಸ್ಥಾನದ ಪ್ರತಿಪ್ರತಿಷ್ಠಾ ದಶಮನೋತ್ಸವ ಕಾರ್ಯಕ್ರಮದ ಸ೦ಭ್ರಮವು ಜರಗಲಿದೆ-30ರ ಸೋಮವಾರದ೦ದು ಶ್ರೀದಾಮೋದರ ದೇವರಿಗೆ ಚಿನ್ನದ ಕವಚ ಸಮರ್ಪಣಾ ಕಾರ್ಯಕ್ರಮವು ಜರಗಲಿದೆ....

ಬೆಳ್ಳಾರೆ: ಪ್ರವೀಣ್ ಹತ್ಯೆ ಆರೋಪಿಗಳ ಬಂಧನ – ಗುತ್ತಿಗಾರು ಪೇಟೆಯಲ್ಲಿ ಅಂಗಡಿಗಳಿಗೆ ಹಾನಿ

ಬೆಳ್ಳಾರೆ:ಜು 27:: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಮೊಹ್ಮದ್‌ ಶಫೀಕ್‌ ಬೆಳ್ಳಾರೆ (27), ಜಾಕೀರ್‌ ಸವಣೂರು (29) ಎಂಬ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿಗಳ ಬಂಧನ ವಿಷಯ ತಿಳಿಯುತ್ತಿದ್ದಂತೆ ಗುತ್ತಿಗಾರು ಪೇಟೆಯಲ್ಲಿ ಅಂಗಡಿಗಳ ಮೇಲೆ ಕಲ್ಲೆಸೆತ , ಗಲಾಟೆ ಆರಂಭವಾಗಿದೆ.

ಶಫೀಕ್ ಗುತ್ತಿಗಾರಿನ ಅಡಿಕೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಹೀಗಾಗಿ ತೀವ್ರ ಆಕ್ರೋಶಗೊಂಡ ಕೆಲವು ಮಂದಿ ಅಡಿಕೆ ಅಂಗಡಿಗೆ ನುಗ್ಗಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದಲ್ಲದೆ ಗುಂಪೊಂದು ನುಗ್ಗಿ ಸುತ್ತಮುತ್ತ 4-5 ಅಂಗಡಿಗಳಿಗೆ ನುಗ್ಗಿ ಹಾನಿ ಮಾಡಿರುವುದಾಗಿ ತಿಳಿದುಬಂದಿದೆ.

No Comments

Leave A Comment