Log In
BREAKING NEWS >
ಫೆ.14 ಮತ್ತು 15ರ೦ದು ಉಡುಪಿಯ ಪಣಿಯಾಡಿಯ ಶ್ರೀಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭ ದೇವಸ್ಥಾನದ ಧ್ವಜಸ್ತ೦ಭದ ಸ್ಥಾಪನಾ ಕಾರ್ಯಕ್ರಮವು ನಡೆಯಲಿದೆ.....

ಕಾಸರಗೋಡು: ಬಸ್ಸಿನಲ್ಲಿ ಸಾಗಿಸುತ್ತಿದ್ದ 36.47 ಲಕ್ಷ ರೂ . ನಗದು ಸಹಿತ ಓರ್ವನ ವಶ

ಕಾಸರಗೋಡು:ಜು 29. ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಕೆ.ಎಸ್.ಆರ್ .ಟಿ.ಸಿ ಬಸ್ಸಿನಲ್ಲಿ ಯಾವುದೇ ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ36.47 ಲಕ್ಷ ರೂ. ನಗದನ್ನು ಜು .29 ರ ಮುಂಜಾನೆ ಅಬಕಾರಿ ದಳದ ಸಿಬಂದಿಗಳು ವಶಪಡಿಸಿಕೊಂಡಿದ್ದು , ಓರ್ವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿಯನ್ನು ಮಹಾರಾಷ್ಟ್ರ ಸಾಂಗ್ಲಿಯ ಗೋಪಾಲ್ ಎಂದು ಗುರುತಿಸಲಾಗಿದೆ. ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ಸಂದರ್ಭದಲ್ಲಿ ಹಣ ಪತ್ತೆಯಾಗಿದೆ.

ಕಾಸರಗೋಡಿನ ಜುವೆಲ್ಲರಿಯೊಂದಕ್ಕೆ ಒಪ್ಪಿಸಲು ಈ ಹಣ ತಂದಿದ್ದಾಗಿ ಈತ ವಿಚಾರಣೆ ಸಂದರ್ಭದಲ್ಲಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಆದರೆ ಈತ ನಿರಂತರ ಹವಾಲ ಹಣ ಸಾಗಾಟ ಮಾಡುತ್ತಿದ್ದುದಾಗಿ ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ.

No Comments

Leave A Comment