Log In
BREAKING NEWS >
```````ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆಮತ್ತು ಅಭಿಮಾನಿಗಳಿಗೆ ಶ್ರೀಗೌರಿ-ಗಣೇಶ ಹಬ್ಬದ ಶುಭಾಶಯಗಳು````````

ಭಟ್ಕಳ: ISIS ಉಗ್ರ ಸಂಘಟನೆ ಬೆಂಬಲಿಗರನ್ನು ವಶಕ್ಕೆ ಪಡೆದ NIA-ರಾಜ್ಯದ 3 ಜಿಲ್ಲೆಗಳಲ್ಲಿ ಎನ್‌ಐಎ ದಾಳಿ – ಮೂವರು ಶಂಕಿತ ಉಗ್ರರು ವಶಕ್ಕೆ

ಬೆಂಗಳೂರು: ಜು 31. ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಏಕಕಾಲದಲ್ಲಿ ದಾಳಿ ನಡೆಸಿದ್ದು, ಮೂವರು ಶಂಕಿತ ಉಗ್ರರನ್ನು ವಶಕ್ಕೆ ಪಡೆದುಕೊಂಡಿದೆ.ಉತ್ತ

ರ ಕನ್ನಡ ಜಿಲ್ಲೆಯ ಭಟ್ಕಳ, ತುಮಕೂರು ಹಾಗೂ ಬೆಳಗಾವಿಯಲ್ಲಿ ದಾಳಿ ನಡೆಸಿರುವ ಎನ್‌ಐಎ ಅಧಿಕಾರಿಗಳು ಮೂರು ಶಂಕಿತ ಉಗ್ರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಎನ್‌ಐಎ ಹಾಗೂ ರಾಜ್ಯ ಗುಪ್ತದಳ ಅಧಿಕಾರಿಗಳಿಂದ ಈ ಕಾರ್ಯಾಚಾರಣೆ ನಡೆಸಿದ್ದು, ಮೂವರು ಶಂಕಿತರು ಐಸಿಸ್ ಜತೆ ಸಂಪರ್ಕ ಹೊಂದಿದ್ದರು ಎಂಬ ಮಾಹಿತಿ ಮೇರೆಗೆ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

ಭಟ್ಕಳ: ರಾಜ್ಯದಲ್ಲಿ ಭಯೋತ್ಪಾದಕರು, ಭಯೋತ್ಪಾದಕರ ಬೆಂಬಲಿಗರ ಬಂಧನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್- ಸಿರಿಯಾ (ISIS) ಭಯೋತ್ಪಾದಕ ಸಂಘಟನೆಯನ್ನು ಬೆಂಬಲಿಸುತ್ತಿದ್ದ ಇಬ್ಬರನ್ನು ಭಟ್ಕಳದಲ್ಲಿ ಎನ್ಐಎ ವಶಕ್ಕೆ ಪಡೆದಿದೆ.

ಐಎಸ್ಐಎಸ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಆರೋಪದಡಿ 30 ವರ್ಷದ ಅಬ್ದುಲ್ ಮುಕ್ತದೀರ್ ಹಾಗೂ ಆತನ ಸಹೋದರನನ್ನು ಎನ್ಐಎ ವಶಕ್ಕೆ ಪಡೆದಿದೆ.

ಸಾಮಾಜಿಕ ಜಾಲತಾಣದಲ್ಲಿ ಐಎಸ್ಐಎಸ್ ಉಗ್ರ ಸಂಘಟನೆಯ ಪರ ಲೈಕ್, ಕಾಮೆಂಟ್ ಮಾಡುತ್ತಿದ್ದ ವ್ಯಕ್ತಿ ಉಗ್ರ ಸಂಘಟನೆಯನ್ನು ಬೆಂಬಲಿಸುತ್ತಿದ್ದ ಅಷ್ಟೇ ಅಲ್ಲದೇ ಐಸಿಸ್ ಬರಹಗಳನ್ನು ಭಾಷಾಂತರ ಮಾಡುತ್ತಿದ್ದ ಎಂಬ ಶಂಕೆಯ ಆಧಾರದಲ್ಲಿ ಇಬ್ಬರನ್ನೂ ಬಂಧಿಸಲಾಗಿದೆ. ಅಧಿಕಾರಿಗಳು ಬಂಧಿತ ವ್ಯಕ್ತಿಯನ್ನು ಗೌಪ್ಯ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಬೆಳಿಗ್ಗೆ 4 ಗಂಟೆ ವೇಳೆಗೆ ಈ ಕಾರ್ಯಾಚರಣೆ ನಡೆದಿದ್ದು ಅಬ್ದುಲ್ ಮುಕ್ತದೀರ್ ನ್ನು ಆತನ ನಿವಾಸದಲ್ಲಿ ವಶಕ್ಕೆ ಪಡೆಯಲಾಗಿತ್ತು. ಇದಕ್ಕೂ ಮುನ್ನ ಬೆಂಗಳೂರು ಹಾಗೂ ದೆಹಲಿ ಎನ್ಐಎ ಅಧಿಕಾರಿಗಳು ಕೆಲದಿನಗಳ ಕಾಲ ಆತನ ಚಲನವಲನಗಳನ್ನು ಗಮನಿಸುತ್ತಿದ್ದರು ಎನ್ನಲಾಗಿದೆ.

No Comments

Leave A Comment