ಉಡುಪಿ: ಫಾಝಿಲ್ ಹತ್ಯೆಗೆ ಬಳಸಿದ ಕಾರು ಪಡುಬಿದ್ರೆಯ ನಿರ್ಜನ ಪ್ರದೇಶದಲ್ಲಿ ಪತ್ತೆ
ಉಡುಪಿ;ಜು 31. ಮಂಗಳೂರಿನ ಸುರತ್ಕಲ್‌ನಲ್ಲಿ ನಡೆದ ಫಾಝಿಲ್ ಹತ್ಯೆಗೆ ಬಳಸಿದ ಬಿಳಿ ಬಣ್ಣದ ಇಯಾನ್ ಕಾರು ಪಡುಬಿದ್ರೆಯ ಇನ್ನಾ ಗ್ರಾಮದ ನಿರ್ಜನ ಪ್ರದೇಶದಲ್ಲಿ ಭಾನುವಾರ ಪತ್ತೆಯಾಗಿದೆ.
ಭಾನುವಾರ ಬೆಳಿಗ್ಗೆ ಸ್ಥಳೀಯರು ಉಡುಪಿ ಜಿಲ್ಲಾ ಪೋಲಿಸರಿಗೆ ಅಪರಿಚಿತ ಕಾರು ಇರುವ ಬಗ್ಗೆ ಮಾಹಿತಿ ನೀಡಿದ್ದು, ಪೋಲಿಸರು ಸ್ಥಳಕ್ಕೆ ತೆರಳಿ ಕಾರನ್ನು ಗಮನಿಸಿದಾಗ ಫಾಜಿಲ್ ಹತ್ಯೆಗೆ ಬಳಸಿದ ಕಾರು ಎಂಬುದು ತಿಳಿದಿದೆ.
ಆರೋಪಿಗಳು ಕಾರನ್ನು ಸುರತ್ಕಲ್‌ನಿಂದ ಪಡುಬಿದ್ರೆಯ ಇನ್ನಾಕ್ಕೆ ಆಗಮಿಸಿ ಕಾರನ್ನು ಬಿಟ್ಟು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.