Log In
BREAKING NEWS >
ಫೆ.14 ಮತ್ತು 15ರ೦ದು ಉಡುಪಿಯ ಪಣಿಯಾಡಿಯ ಶ್ರೀಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭ ದೇವಸ್ಥಾನದ ಧ್ವಜಸ್ತ೦ಭದ ಸ್ಥಾಪನಾ ಕಾರ್ಯಕ್ರಮವು ನಡೆಯಲಿದೆ.....

ಮಣಿಪಾಲ‌ ಪೈ ಕುಟುಂಬದ ಹಿರಿಯರಾದ ತೋನ್ಸೆ ಮೋಹನ್ ದಾಸ್ ಪೈ ನಿಧನ

ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲದ ಪೈ ಕುಟುಂಬದ ಹಿರಿಯರಾದ, ಉದಯವಾಣಿ ಪತ್ರಿಕೆಯ ಸಂಸ್ಥಾಪಕ, ವಿವಿಧ ಸಂಘಸಂಸ್ಥೆಗಳಲ್ಲಿ ತೆರೆಮರೆಯಲ್ಲಿದ್ದು ಮಾರ್ಗದರ್ಶನ ನೀಡಿ ಮುನ್ನಡೆಸುತ್ತಿದ್ದ ತೋನ್ಸೆ ಮೋಹನದಾಸ್ ಪೈ (89) ಅಸೌಖ್ಯದಿಂದ ಜು. 31ರಂದು ಮಣಿಪಾಲದ ಆಸ್ಪತ್ರೆಯಲ್ಲಿ ನಿಧನ ಹೊಂದಿದರು ಎಂದು ತಿಳಿದು ಬಂದಿದೆ.

ಮಣಿಪಾಲ ಟಿ.ಎಂ ಪೈಯವರ ಮತ್ತು ಶಾರದಾ ಪೈ ಅವರ ಮಗನಾದ ಮೋಹನ ದಾಸ್ ಪೈ ಅವರ ತಮ್ಮಂದಿರಾದ ಡಾ.ಟಿ.ರಾಮದಾಸ್ ಪೈ, ಟಿ.ನಾರಾಯಣ ಪೈ, ಟಿ.ಅಶೋಕ್ ಪೈ, ತಂಗಿಯರಾದ ವಸಂತಿ ಆರ್. ಶೆಣೈ, ಜಯಂತಿ ಪೈ, ಇಂದುಮತಿ ಪೈ, ಆಶಾ ಪೈ, ಸಹೋದರ ಟಿ.ಸತೀಶ್ ಯು. ಪೈ ಅವರನ್ನು ಅಗಲಿದ್ದಾರೆ.

ಮೋಹನ್ ದಾಸ್ ಪೈ ಅವರು ಆಸ್ಪತ್ರೆಯಲ್ಲಿ ಇತ್ತೀಚಿಗೆ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಪೈ ಕುಟುಂಬದ ಎಲ್ಲ ಸದಸ್ಯರು, ಭಾವ ಡಾ. ಬಾಲಕೃಷ್ಣ ಪೈ ಮೊದಲಾದವರು ಜತೆಯಲ್ಲಿದ್ದು ಆರೈಕೆಯಲ್ಲಿ ತೊಡಗಿದ್ದರು.

ಆಧುನಿಕ ಮಣಿಪಾಲದ ಶಿಲ್ಪಿ ಡಾ.ಟಿ.ಎಂ.ಎ.ಪೈಯವರ ಹೆಸರು ಹೊತ್ತ ಡಾಟಿಎಂಎ ಪೈ ಪ್ರತಿಷ್ಠಾನ, ಡಾ. ಟಿಎಂಎ ಪೈಯವರು ಸ್ಥಾಪಿಸಿದ ಮೊದಲ ಕಾಲೇಜು ಶಿಕ್ಷಣ ಸಂಸ್ಥೆ ಎಂಜಿಎಂ ಕಾಲೇಜಿನ ಟ್ರಸ್ಟ್‌, ಸಿಂಡಿಕೇಟ್ ಬ್ಯಾಂಕ್ ನ ಪೂರ್ವ ರೂಪ ಐಸಿಡಿಎಸ್ ಲಿ., ‘ಉದಯವಾಣಿ’ಯನ್ನು ನಡೆಸುತ್ತಿರುವ ಮಣಿಪಾಲ್ ಮೀಡಿಯ ನೆಟ್‌ವರ್ಕ್ ಲಿ. ಮೊದಲಾದ ಸಂಸ್ಥೆಗಳ ಅಧ್ಯಕ್ಷರಾಗಿ ಹೀಗೆ ಹಲವು ಸಂಸ್ಥೆಗಳ ಬೆಳವಣಿಗೆಗೆ ಕಾರಣರಾದವರು.

ಆ.1ರ ಬೆಳಿಗ್ಗೆ 9ರಿಂದ 11ಗಂಟೆಯವರೆಗೆ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ನ೦ತರ ಬೀಡಿನಗುಡ್ಡೆಯಲ್ಲಿರುವ ಸ್ಮಶಾನದಲ್ಲಿ ಮೃತದೇಹವನ್ನು ದಹಿಸಲಾಯಿತು.

No Comments

Leave A Comment