Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಅಮೇರಿಕಾ ಡ್ರೋನ್ ದಾಳಿ – ಕಾಬೂಲ್ ನಲ್ಲಿದ್ದ ಅಲ್‌ಖೈದಾ ಮುಖ್ಯಸ್ಥ ಝವಾಹಿರಿ ಹತ್ಯೆ

ವಾಷಿಂಗ್ಟನ್‌:ಆ,02 . “ಅಲ್‌ ಖೈದಾ ಉಗ್ರ ಸಂಘಟನೆ ಮುಖ್ಯಸ್ಥ ಆಯ್ಮಾನ್ ಅಲ್‌ ಝವಾಹಿರಿಯನ್ನು ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಡ್ರೋನ್ ದಾಳಿ ನಡೆಸಿ ಹತ್ಯೆಗೈಯಲಾಗಿದೆ” ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಘೋಷಿಸಿದ್ದಾರೆ.

ಸುದ್ದಿ ವಾಹಿನಿಯಲ್ಲಿ ಈ ಬಗ್ಗೆ ಮಾತನಾಡಿ, “ಶನಿವಾರ ಅಮೇರಿಕಾದ ಸೆಂಟ್ರಲ್ ಇಂಟಲಿಜೆನ್ಸ್ ಏಜನ್ಸಿ (ಸಿಐಎ) ನಡೆಸಿದ ದಾಳಿಯಲ್ಲಿ ಝವಾಹಿರಿ ಹತನಾಗಿದ್ದಾನೆ. ದಾಳಿಯಲ್ಲಿ ನಾಗರಿಕರ ಹತ್ಯೆಯಾಗಿಲ್ಲ” ಎಂದು ಹೇಳಿದ್ದಾರೆ.

ಮೋಸ್ಟ್ ವಾಂಟೆಡ್ ಉಗ್ರನಾಗಿದ್ದ ಆಯ್ಮಾನ್ ಅಲ್‌ ಝವಾಹಿರಿ, 2001ರ ಸೆಪ್ಟೆಂಬರ್‌ 11ರಂದು ಅಮೆರಿಕದ ವಿಶ್ವ ವಾಣಿಜ್ಯ ಕೇಂದ್ರದ ಮೇಲೆ ನಡೆದಿದ್ದ ದಾಳಿಯ ಪ್ರಮುಖ ಶಂಕಿತ ಸಂಚುಕೋರ ಆಗಿದ್ದ.

ಕಾಬೂಲ್‌ನ ನಿವಾಸದ ಬಾಲ್ಕನಿಯಲ್ಲಿ ಝವಾಹಿರಿಯನ್ನು ಡ್ರೋನ್ ದಾಳಿಯ ಮೂಲಕ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

No Comments

Leave A Comment