Log In
BREAKING NEWS >
ಉಡುಪಿ ನಗರದಲ್ಲಿ ರಿಕ್ಷಾ ಮೀಟರ್ ಕನಿಷ್ಠದರ ರೂ.40/-ಫಿಕ್ಸ್:ಕಿ.ಮೀಟರ್ ಗೆ ರೂ.20/-ಜಾರಿಗೆ ಕ್ಷಣಗಣನೆ…

ಅಪಾರ ಪ್ರಮಾಣದ ಮದ್ದುಗುಂಡುಗಳ ಸಹಿತ ಆರು ಮಂದಿಯ ಬಂಧನ

ನವದೆಹಲಿ:ಆ 12. ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ದೆಹಲಿ ಪೊಲೀಸರು ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದು, ಆರು ಜನರನ್ನು ಬಂಧಿಸಿದ್ದಾರೆ.

ಬಂಧಿತರ ವಶದಿಂದ 2,000 ಜೀವಂತ ಕಾಟ್ರಿಡ್ಜ್‌ಗಳು ಸೇರಿದಂತೆ ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.ಈ ಸಂಬಂಧ ಆರು ಆರೋಪಿಗಳನ್ನು ಬಂಧಿಸಲಾಗಿದೆ.

ಮಾಹಿತಿಯ ಪ್ರಕಾರ, ಪೂರ್ವ ದೆಹಲಿ ಪೊಲೀಸರು ಆನಂದ್ ವಿಹಾರ್ ಪ್ರದೇಶದಲ್ಲಿ ಎರಡು ಚೀಲಗಳಲ್ಲಿದ್ದ ಕಾಟ್ರಿಡ್ಜ್‌ಗಳೊಂದಿಗೆ ಬಂಧಿಸಲಾಗಿದೆ. 2,000 ಜೀವಂತ ಕಾಟ್ರಿಡ್ಜ್‌ಗಳನ್ನು ಎಲ್ಲಿಗೆ ಸರಬರಾಜು ಮಾಡಬೇಕಿತ್ತು ಮತ್ತು ಅದರ ಹಿಂದಿನ ಉದ್ದೇಶವೇನು ಎಂಬುದರ ಕುರಿತು ಈ ಆರೋಪಿಗಳನ್ನು ಪ್ರಶ್ನಿಸಲಾಗುತ್ತಿದೆ.

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಆಗಸ್ಟ್ 15 ರಂದು ಭಾರತ ಸ್ವಾತಂತ್ರ್ಯ ದಿನಾಚರಣೆಗೆ ಸಜ್ಜಾಗುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಾದ್ಯಂತ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.ಪೊಲೀಸರು ಗಸ್ತು ಮತ್ತು ವಾಹನಗಳ ತಪಾಸಣೆಯನ್ನು ತೀವ್ರಗೊಳಿಸಿದ್ದಾರೆ.

No Comments

Leave A Comment