Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

‘ಹರ್ ಘರ್ ತಿರಂಗಾ’ ರಾಷ್ಟ್ರಧ್ವಜವನ್ನು ಭಕ್ತರಿಗೆ ಅದಮಾರು ಶ್ರೀಗಳಿ೦ದ ಹಸ್ತಾಂತರ

ಶ್ರೀ ಕ್ಷೇತ್ರ ಕುಂಜಾರುಗಿರಿ ದುರ್ಗಾ ದೇವಸ್ಥಾನದಲ್ಲಿ,ಚಾತುರ್ಮಾಸ ವೃತ ಸಂಕಲ್ಪಿತರಾದ ಅದಮಾರು ಮಠಾಧೀಶರಾದ ಶ್ರೀವಿಶ್ವಪ್ರಿಯ ತೀರ್ಥ ಶ್ರೀಪಾದರು,ಭಾರತದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಈ ಸುಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿರುವ ‘ಹರ್ ಘರ್ ತಿರಂಗಾ‘ ಕಾರ್ಯಕ್ರಮದ ಅಂಗವಾಗಿ ಗಿರಿಬಳಗದ ವತಿಯಿಂದ ಉಚಿತವಾಗಿ ರಾಷ್ಟ್ರಧ್ವಜವನ್ನು ಭಕ್ತರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಬಂಧಕರಾದ ರಾಜೇಂದ್ರ ರಾವ್,ಗಿರಿಬಳಗದ ಅಧ್ಯಕ್ಷರಾದ ಪುಂಡರೀಕಾಕ್ಷ ಭಟ್ ಮತ್ತು ಸದಸ್ಯರು ಉಪಸ್ಥಿತರಿದ್ದರು.

No Comments

Leave A Comment