Log In
BREAKING NEWS >
ಉಡುಪಿ ನಗರದಲ್ಲಿ ರಿಕ್ಷಾ ಮೀಟರ್ ಕನಿಷ್ಠದರ ರೂ.40/-ಫಿಕ್ಸ್:ಕಿ.ಮೀಟರ್ ಗೆ ರೂ.20/-ಜಾರಿಗೆ ಕ್ಷಣಗಣನೆ…

ರಸ್ತೆ ಬದಿ ಹುಲ್ಲು ತೆಗೆಯುತ್ತಿದ್ದ ಕಾರ್ಮಿಕರಿಗೆ ಅಪರಿಚಿತ ವಾಹನ ಢಿಕ್ಕಿ : ಓರ್ವ ಸಾವು : ಮತ್ತೋರ್ವ ಗಾಯ

ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ರಾಷ್ಟ್ರೀಯ ಹೆದ್ದಾರಿ 66ರ ಜೆಪ್ಪಿನಮೊಗರು ಬಳಿ ರಸ್ತೆ ಬದಿ ಹುಲ್ಲು ತೆಗೆಯುತ್ತಿದ್ದ ಕಾರ್ಮಿಕರ ಮೇಲೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಓರ್ವ ಸಾವನ್ನಪ್ಪಿದ ಘಟನೆ ಇಂದು ಸಂಭವಿಸಿದೆ.

ಮೃತಪಟ್ಟ ವ್ಯಕ್ತಿ ಬಿಹಾರ ಮೂಲದ ಕಾರ್ಮಿಕ ವಿಕ್ಕಿ(30) ಎಂದು ತಿಳಿಯಲಾಗಿದೆ. ಬ್ರಹ್ಮಾವರದ ಗೋಪಾಲ ಪೂಜಾರಿ ಎಂಬವರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಇಂದು ಬೆಳಗ್ಗೆ ಕಾರ್ಮಿಕರು ಹೆದ್ದಾರಿ ಪಕ್ಕದ ಹುಲ್ಲು ಮತ್ತು ಗಿಡಗಳನ್ನು ಕತ್ತರಿಸುವ ಕಾರ್ಯದಲ್ಲಿ ತೊಡಗಿದ್ದಾಗ ಈ ಅಪಘಾತ ನಡೆದಿದೆ. ವಿಕ್ಕಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಗೋಪಾಲ್ ಪೂಜಾರಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

No Comments

Leave A Comment