Log In
BREAKING NEWS >
ಫೆ.14 ಮತ್ತು 15ರ೦ದು ಉಡುಪಿಯ ಪಣಿಯಾಡಿಯ ಶ್ರೀಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭ ದೇವಸ್ಥಾನದ ಧ್ವಜಸ್ತ೦ಭದ ಸ್ಥಾಪನಾ ಕಾರ್ಯಕ್ರಮವು ನಡೆಯಲಿದೆ.....

ಶಿವಮೊಗ್ಗದಲ್ಲಿ ಮತ್ತೆ ಫೋಟೋ ಅಳವಡಿಕೆ ವಿವಾದ, ಲಾಠಿ ಚಾರ್ಜ್ – 144 ಸೆಕ್ಷನ್ ಜಾರಿ

ಶಿವಮೊಗ್ಗ:ಆ 15. ಶಿವಮೊಗ್ಗದಲ್ಲಿ ಅಮೃತ ಮಹೋತ್ಸವವನ್ನು ಅಮೃತ ಮಹೋತ್ಸವದ ಆಚರಣೆ ವೇಳೆ ಸಾವರ್ಕರ್ – ಟಿಪ್ಪು ಫೋಟೋ ಅಳವಡಿಕೆ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ. ವಿವಾದ ಕಿಡಿ ಗಲಾಟೆಯ ರೂಪ ಪಡೆಯುತ್ತಿದ್ದಂತೆಯೇ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರದಾದ್ಯಂತ 144 ಸೆಕ್ಷನ್ ಜಾರಿಗೊಳಿಸಲಾಗಿದೆ.

ಶಿವಮೊಗ್ಗದ ಅಮೀರ್ ಅಹ್ಮದ್ ಸರ್ಕಲ್ ನಲ್ಲಿ ಹಿಂದೂಪರ ಸಂಘಟನೆ ಕಾರ್ಯ ಕಾರ್ಯಕರ್ತರು ವೀರ ಸಾವರ್ಕರ್ ಭಾವಚಿತ್ರ ಹಾಕಿದ್ದಾರೆ. ಇದಕ್ಕೆ ವಿರೋಧವಾಗಿ ಮುಸ್ಲಿಂ ಸಮುದಾಯದವರು ಟಿಪ್ಪು ಭಾವಚಿತ್ರ ಹಾಕಿದ್ದಾರೆ.

ಇದಾದ ಬಳಿಕ ಹಿಂದೂ ಹಾಗೂ ಮುಸ್ಲಿಂ ಸಮುದಾಯದ ಮುಖಂಡರು ಪರ-ವಿರೋಧದ ಘೋಷಣೆ ಕೂಗಿದ್ದಾರೆ. ಹೀಗಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿ ತಾರಕ್ಕೇರುವ ಮೊದಲೇ ಪೊಲೀಸರು ಲಾಠಿಚಾರ್ಜ್ ಮಾಡಿ ಜನರನ್ನು ಚದುರಿಸಿದ್ದಾರೆ.

ಇತ್ತೀಚೆಗೆ ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರರ ಛಾಯಾಚಿತ್ರ ಪ್ರದರ್ಶನದ ವೇಳೆಯೂ ವೀರ ಸಾವರ್ಕರ್ ಫೋಟೋ ವಿಚಾರವಾಗಿ ವಿವಾದ ಉಂಟಾಗಿತ್ತು.

No Comments

Leave A Comment