Log In
BREAKING NEWS >
ಉಡುಪಿ: ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ಕಾಂಕ್ರೀಟಿಕರಣ ಹಿನ್ನಲೆ : 45 ದಿನ ಘನ ವಾಹನ ಸಂಚಾರಕ್ಕೆ ನಿಷೇಧ- ಡಿಸಿ ಆದೇಶ...

ಉಡುಪಿ ಜಿಲ್ಲೆಯ ನೂತನ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡ ಅಕ್ಷಯ್ ಮಚೀಂದ್ರ

ಉಡುಪಿ:ಆ 17. ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಕ್ಷಯ್ ಮಚೀಂದ್ರ ಅವರು ಇಂದು ಅಧಿಕಾರ ವಹಿಸಿಕೊಂಡಿದ್ದು, ಉಡುಪಿಯ ಮಾಜಿ ಎಸ್ಪಿ ಎನ್.ವಿಷ್ಣುವರ್ಧನ್ ಅವರು ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಅಧಿಕಾರ ಹಸ್ತಾಂತರಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅಕ್ಷಯ್ ಮಚೀಂದ್ರ, ಕಳೆದ ಎರಡೂವರೆ ವರ್ಷಗಳಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಸ್‌ಪಿಯಾಗಿ ಸೇವೆ ಸಲ್ಲಿಸಿದ್ದೇನೆ. ಉಡುಪಿಯು ಶಿಕ್ಷಣ, ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಹೆಸರುವಾಸಿಯಾದ ಜಿಲ್ಲೆಯಾಗಿದೆ. ಉಡುಪಿಯಲ್ಲಿ ಸೇವೆ ಸಲ್ಲಿಸುವುದು ನನ್ನ ಅದೃಷ್ಟ ಎಂದು ಭಾವಿಸುತ್ತೇನೆ ಎಂದರು.

ಇನ್ನು ರಾಜ್ಯ ಮತ್ತು ಜಿಲ್ಲಾ ಪೊಲೀಸರು ಡ್ರಗ್ಸ್ ಮಾಫಿಯಾ ನಿಗ್ರಹಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಜಿಲ್ಲೆಯಲ್ಲಿ ಡ್ರಗ್ಸ್ ಮಾಫಿಯಾಗೆ ಕಡಿವಾಣ ಹಾಕಲು ನಾನೂ ಶ್ರಮಿಸುತ್ತೇನೆ. ಡ್ರಗ್ಸ್ ಮಾಫಿಯಾದ ಹಣ ನಾನಾ ಅಕ್ರಮಗಳಿಗೆ ಬಳಕೆಯಾಗುತ್ತಿದೆ. ಯುವಕರು ಡ್ರಗ್ಸ್ ಗೆ ಬಲಿಯಾಗುತ್ತಿದ್ದಾರೆ. ಉಡುಪಿಯಲ್ಲಿ ಈ ಹಿಂದೆ ಜಾರಿಯಲ್ಲಿದ್ದ ಎಸ್‌ಪಿ ಫೋನ್‌-ಇನ್‌ ಕಾರ್ಯಕ್ರಮವನ್ನು ಪುನರಾರಂಭಿಸಲು ಉದ್ದೇಶಿಸುತ್ತೇನೆ. ಪೊಲೀಸ್ ಠಾಣೆಗಳು ಜನಸ್ನೇಹಿಯಾಗಲಿವೆ. ಪೊಲೀಸ್ ಇಲಾಖೆ ಮತ್ತು ಜನರ ನಡುವಿನ ಅಂತರ ಕಡಿಮೆ ಮಾಡಲು ಪ್ರಯತ್ನಿಸುತ್ತೇನೆ ಎಂದಿದ್ದಾರೆ.

ಜಿಲ್ಲೆಯಲ್ಲಿ ನಡೆಯುತ್ತಿರುವ ಬ್ಯಾನರ್ ವಿವಾದದ ಕುರಿತು ಮಾತನಾಡಿದ ಅಕ್ಷಯ್ ಮಚೀಂದ್ರ, ಬೆಳವಣಿಗೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

No Comments

Leave A Comment